
ಕೆಪಿಎಸ್ಸಿಯಲ್ಲಿ ಅಕ್ರಮ ಆರೋಪ: ರಾಜ್ಯದ 21 ಸ್ಥಳಗಳಲ್ಲಿ ಇ.ಡಿ ಶೋಧ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ಅಕ್ರಮ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ, ಜಾರಿ ನಿರ್ದೇಶನಾಲಯವು(ಇಡಿ) ಮಂಗಳವಾರ ರಾಜ್ಯದ 21 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ 13 ಮತ್ತು ರಾಜ್ಯದ ಇತರೆ 8 ಸ್ಥಳಗಳಲ್ಲಿ ದಾಳಿ ನಡೆದಿದೆ.
ಕೆಪಿಎಸ್ಸಿ ಮಾಜಿ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ಸೇರಿದ ಮೂರು ಸ್ಥಳಗಳಲ್ಲೂ ಶೋಧ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..