
ಸಿರುಗುಪ್ಪ: 24 ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ
ಸಿರುಗುಪ್ಪ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರು ಪೂರೈಸುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 119 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅವುಗಳಲ್ಲಿ ಪ್ರಸ್ತುತ 24 ಘಟಕಗಳು ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿವೆ.
ತಾಲ್ಲೂಕಿನಲ್ಲಿರುವ ಒಟ್ಟು 119 ಘಟಕಗಳ ಪೈಕಿ 57 ಘಟಕಗಳನ್ನು ಆಯಾ ಗ್ರಾಮ ಪಂಚಾಯಿತಿಗಳು ನಿರ್ವಹಣೆ ಮಾಡುತ್ತಿದ್ದರೆ, ಇನ್ನುಳಿದ 62 ಘಟಕಗಳ ನಿರ್ವಹಣೆಯ ಜವಾಬ್ದಾರಿಯನ್ನು ‘ಆರ್.ಎಸ್. ಅಕ್ವಾ ಏಜೆನ್ಸಿ’ಗೆ ವಹಿಸಲಾಗಿದೆ. ಆದರೆ ಸೂಕ್ತ ನಿರ್ವಹಣೆಯಿಲ್ಲದೆ 26 ಘಟಕಗಳು ಬಂದ್ ಆಗಿರುವುದರಿಂದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ.
ಒಂದು ಕಡೆ ಬರಗಾಲ ಮತ್ತೊಂದು ಕಡೆದ ಅಧಿಕಾರಿಗಳ ಬೇಜವಾಬ್ದರಿಯಿಂದ ಕೆಲವೊಂದು ಘಟಕಗಳು ತಿಂಗಳು, ವರ್ಷಗಳು ಕಳೆದರು ಅವುಗಳನ್ನು ಸರಿಪಡಿಸದೆ ಹಾಗೇ ಬಿಟ್ಟ ಉದಾಹರಣೆಗಳಿವೆ. ಕೆಲವೊಂದು ಗ್ರಾಮಗಳಲ್ಲಿ ಜನರು 4-5 ಕಿ.ಮೀ. ಗಾಡಿ ಮೇಲೆ ಹೋಗಿ ಶುದ್ದಕುಡಿಯುವ ನೀರು ತರುತ್ತಿದ್ದಾರೆ.
ಸ್ಥಗಿತಗೊಂಡಿರುವ ಘಟಕಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ದಿನನಿತ್ಯ ಶುದ್ಧ ಕುಡಿಯುವ ನೀರು ಸಿಗುವಂತೆ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260830-25-1095826831