25 ಆಗಸ್ಟ್ 2026: ಈ ದಿನದ ಪ್ರಮುಖ 10 ಸುದ್ದಿಗಳು...

25 ಆಗಸ್ಟ್ 2026: ಈ ದಿನದ ಪ್ರಮುಖ 10 ಸುದ್ದಿಗಳು...

25 ಆಗಸ್ಟ್ 2026: ಈ ದಿನದ ಪ್ರಮುಖ 10 ಸುದ್ದಿಗಳು...

ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ದತ್ತೂರಿ ಹಣ್ಣು ಮಾರಾಟ: ಇ–ಕಾಮರ್ಸ್ ವೇದಿಕೆಗಳ ಆಹಾರ ಪರವಾನಗಿ ಅಮಾನತು!

 ಇ–ಕಾಮರ್ಸ್‌ ವೇದಿಕೆಗಳಾದ ಅಮೆಜಾನ್‌, ಸ್ವಿಗ್ಗಿ, ಇನ್‌ಸ್ಟಾಮಾರ್ಟ್ ಮತ್ತು ಬಿಗ್‌ಬಾಸ್ಕೆಟ್‌ಗೆ ನೀಡಲಾಗಿರುವ ಆಹಾರ ಪರವಾನಗಿಯನ್ನು ಅಮಾನತು ಮಾಡುವಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಇಲಾಖೆ ಸಂಬಂಧಪಟ್ಟ ಆಡಳಿತಕ್ಕೆ ಶಿಫಾರಸು ಮಾಡಿದೆ.

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ; ತ್ರಿವೇಣಿ ಸಂಗಮ ಭರ್ತಿ

 ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು, ತಾಲ್ಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ. ನದಿ ನೀರು ದಡದಲ್ಲಿರುವ ಉದ್ಯಾನ ಹಾಗೂ ಗದ್ದೆಗಳಿಗೆ ನುಗ್ಗಿದೆ.

ನಾಗೇಂದ್ರ ರಾಜೀನಾಮೆಗಾಗಿ ಪಟ್ಟು ಬಿಡದ ವಿಪಕ್ಷ: 2 ದಿನಕ್ಕೆ ಮುನ್ನ ಅಧಿವೇಶನ ಕೊನೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ–ಜೆಡಿಎಸ್‌ ನಡೆಸಿದ ನಿರಂತರ ಧರಣಿಯು ಸುಗಮ ಕಲಾಪಕ್ಕೆ ಅಡ್ಡಿಯಾಗಿದ್ದು, ಮುಂಗಾರು ಅಧಿವೇಶನವು ಎರಡು ದಿನ ಮೊದಲೇ ಕೊನೆಗೊಂಡಿತು.

ಬ್ರಿಕ್ಸ್ ಶೃಂಗಸಭೆ: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಏಳು ವರ್ಷಗಳ ಬಳಿಕ ಭಾರತಕ್ಕೆ?

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ದೊಡ್ಡ ನಿಯೋಗದೊಂದಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ: ಪಂಜಾಬ್‌ಗೆ ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಭೇಟಿ

'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲಾ 117 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ‘ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹೇಳಿದ್ದಾರೆ.

ಬಾಲಕಿಯ ಚಿಕಿತ್ಸೆಗೆ ನೆರವಾಗಲು ಹೂ ಮಾರಾಟಕ್ಕಿಳಿದ ಯುವಕರು: ಓಣಂ ಸಂಭ್ರಮ ಇಮ್ಮಡಿ

 ಕೇರಳಂ ಸಾಂಸ್ಕೃತಿಕ ಪರಂಪರೆ ಮತ್ತು ಕೋಮು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ.

ಕಾವೇರಿ | 9000 ಕ್ಯುಸೆಕ್‌ ನೀರು ಹರಿಸಲು ಶಿಫಾರಸು: ರಾಜ್ಯಕ್ಕೆ ಮತ್ತೆ ಬರೆ

ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಇಳಿಕೆಯಾಗುತ್ತಿರುವುದರ ನಡುವೆಯೂ, ತಮಿಳುನಾಡಿಗೆ ಪ್ರತಿದಿನ 9,000 ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಇದರಿಂದಾಗಿ, ಕಾವೇರಿ ಜಲವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.

SIR ಕರಡು ಪ್ರಕಟ: 4.46 ಕೋಟಿ ಮತದಾರರು ಪಟ್ಟಿಯಲ್ಲಿ, 1.08 ಕೋಟಿ ಮಂದಿ ಹೊರಕ್ಕೆ

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಸೋಮವಾರ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಿಸಿದೆ.

ಚಿಕಿತ್ಸೆಯ ಬಳಿಕ ಪತಿ ದೇವರಕೊಂಡ ಜತೆ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಸಿನಿಮಾದ ಚಿತ್ರೀಕರಣದ ವೇಳೆ ಸೊಂಟದ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ 6 ವಾರಗಳವರೆಗೂ ವಿಶ್ರಾಂತಿ ಪಡೆಯಲು ವೈದ್ಯರ ತಂಡ ಸೂಚನೆ ನೀಡಿತ್ತು.

ಕ್ರೀಡಾ ದಿನ: ಯುವ ಸಮುದಾಯದ ಜೊತೆ ಪ್ರಧಾನಿ ಮೋದಿ ಸಂವಾದ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡಾದಿನದ (ಆ.29) ಪೂರ್ವಭಾವಿಯಾಗಿ ಯುವಕರು ಮತ್ತು ಕ್ರೀಡಾಪಟುಗಳನ್ನು ಉದ್ದೇಶಿಸಿ ಗುರುವಾರ ‘ವರ್ಚುವಲ್‌’ ಆಗಿ ಮಾತನಾಡಲಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ