ಅಭಿಮಾನಿಗಳಿಗೆ ಡಬಲ್ ಧಮಾಕಾ: ಒಂದೇ ವಾರದಲ್ಲಿ ನಯನತಾರಾ ನಟನೆಯ 2 ಸಿನಿಮಾ ತೆರೆಗೆ

ಅಭಿಮಾನಿಗಳಿಗೆ ಡಬಲ್ ಧಮಾಕಾ: ಒಂದೇ ವಾರದಲ್ಲಿ ನಯನತಾರಾ ನಟನೆಯ 2 ಸಿನಿಮಾ ತೆರೆಗೆ

ಅಭಿಮಾನಿಗಳಿಗೆ ಡಬಲ್ ಧಮಾಕಾ: ಒಂದೇ ವಾರದಲ್ಲಿ ನಯನತಾರಾ ನಟನೆಯ 2 ಸಿನಿಮಾ ತೆರೆಗೆ

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರು ಸಿನಿಮಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ. ವಿಶೇಷ ಏನೆಂದರೆ ನಟಿ ನಯನತಾರಾ ಅಭಿನಯದ ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ವಾರದಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ ತೆರೆಗೆ ಬರಲು ಸಜ್ಜಾಗಿವೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಆ್ಯಕ್ಷನ್ ಚಿತ್ರದಲ್ಲಿ ನಯನತಾರಾ ‘ಗಂಗಾ’ ಎಂಬ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟಾಕ್ಸಿಕ್ ಸಿನಿಮಾ ಆಗಸ್ಟ್ 26ರಂದು ತೆರೆಗೆ ಬರಲು ಸಜ್ಜಾಗಿದೆ. ಇಂದು (ಆ.8) ಟಾಕ್ಸಿಕ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಿಮಿತ್ತ ನಟಿ ನಯನತಾರಾ ಬೆಂಗಳೂರಿಗೆ ಆಗಮಿಸಿದ್ದಾರೆ.

ನಟಿ ನಯನತಾರಾ ಮತ್ತು ನಟ ಕವಿನ್ ಸಂಯೋಜನೆಯಲ್ಲಿ ಮೂಡಿ ಬರುತ್ತಿರುವ ‘ಹಾಯ್’ ಸಿನಿಮಾ ಆಗಸ್ಟ್ 28ರಂದು ಬಿಡುಗಡೆಯಾಗುತ್ತಿದೆ. ನಿರ್ದೇಶಕ ವಿಷ್ಣು ಎಡವನ್ ನಿರ್ದೇಶನದಲ್ಲಿ ಸರಳ ಪ್ರೇಮಕಥೆಯ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.

‘ಟಾಕ್ಸಿಕ್’ ದೊಡ್ಡ ಮಟ್ಟದ ಆ್ಯಕ್ಷನ್ ಮತ್ತು ಮಾಸ್ ಪ್ರೇಕ್ಷಕರನ್ನು ಗುರಿಯಾಗಿಸಿಕೊಂಡಿದ್ದರೆ, ‘ಹಾಯ್’ ಭಾವನಾತ್ಮಕ ಹಾಗೂ ಪ್ರೇಮಕಥೆಯ ಮೂಲಕ ಕೌಟುಂಬಿಕ ಮತ್ತು ಯುವ ಪ್ರೇಕ್ಷಕರನ್ನು ಸೆಳೆಯಲು ಸಜ್ಜಾಗಿದೆ.

ನಟಿ ನಯನತಾರಾ ಅವರು ಅಭಿನಯಿಸಿರುವ ಎರಡು ಸಿನಿಮಾಗಳು ಅತಿ ಕಡಿಮೆ ಅಂತರದಲ್ಲಿ ಬಿಡುಗಡೆಯಾಗುತ್ತಿರುವುದರಿಂದ ನಿರ್ಮಾಪಕರಿಗೆ ಬಾಕ್ಸ್ ಆಫೀಸ್ ಕಲೆಕ್ಷನ್‌ ಮೇಲೆ ಇದು ಹೇಗೆ ಪ್ರಭಾವ ಬೀರುತ್ತದೆ ಎಂಬ ಕುತೂಹಲ ಮೂಡಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ