ಆಗಸ್ಟ್‌ 2ರಂದು ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ, ವಸ್ತ್ರ ಸಂಹಿತೆ ಹೇಗಿರಲಿದೆ?

ಆಗಸ್ಟ್‌ 2ರಂದು ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ, ವಸ್ತ್ರ ಸಂಹಿತೆ ಹೇಗಿರಲಿದೆ?

ಆಗಸ್ಟ್‌ 2ರಂದು ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ, ವಸ್ತ್ರ ಸಂಹಿತೆ ಹೇಗಿರಲಿದೆ?

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ಸುಮಾರು 3,400 ಪೊಲೀಸ್‌ ಕಾನ್‌ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 2ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವೆರೆಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಂಡಿದೆ.

ಪರೀಕ್ಷಾರ್ಥಿಗಳು ಉದ್ದನೆ ತೋಳಿನ ಅಂಗಿ ಹಾಗೂ ಶೂಗಳು ಹಾಕಿಕೊಂಡು ಬರುವುದನ್ನು ನಿರ್ಬಂಧಿಸಿದೆ. ಎಲೆಕ್ಟ್ರಾನಿಕ್ಸ್ ಉಪಕರಣಗಳು, ಕ್ಯಾಲುಕ್ಲೇಟರ್, ಸ್ಮಾರ್ಟ್‌ ವಾಚ್, ಮೊಬೈಲ್, ನೋಟ್ಸ್, ಬ್ಯಾಗ್, ಆಹಾರ, ಪಾನೀಯ ಇತ್ಯಾದಿಗಳನ್ನು ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಪರೀಕ್ಷಾ ಕರ್ತವ್ಯಕ್ಕಾಗಿ ಅಗತ್ಯ ಸಿಬ್ಬಂದಿಯನ್ನು ನೇಮಿಸಿದೆ. ವಿಶೇಷವಾಗಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಯಾವುದೇ ಅಡಚಣೆಗಳು ಉಂಟಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆಯೂ ಆದೇಶ ಹೊರಡಿಸಿದೆ. ಪರೀಕ್ಷಾರ್ಥಿಗಳಿಗೆ ಅನಗತ್ಯ ಕಿರಿಕಿರಿ ಉಂಟಾಗದಂತೆ ನೋಡಿಕೊಳ್ಳಲು ಕೆಇಎ ಸೂಚನೆ ನೀಡಿದೆ.

ಪರೀಕ್ಷಾ ಕರ್ತವ್ಯಕ್ಕಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು, ಮಾರ್ಗಾಧಿಕಾರಿಗಳು, ವಿಶೇಷ ಜಾಗೃತ ದಳಗಳನ್ನು ರಚಿಸಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾ ಅಭಿಯಂತರರಿಗೆ ಮನವಿ ಮಾಡಿದೆ.

ಪರೀಕ್ಷೆಗಳು ಸುಗಮವಾಗಿ ಶಾಂತಿಯುತವಾಗಿ ನಡೆಸಲು, ಪರೀಕ್ಷಾ ಅವಧಿಯಲ್ಲಿ ಯಾವುದೇ ಅಕ್ರಮ-ಅವ್ಯವಹಾರಗಳು ನಡೆಯದಂತೆ ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆ ನಡೆಯುವ ದಿನದಂದು ಕೇಂದ್ರಗಳಲ್ಲಿ ಬ್ಲೂಟೂತ್ ಜಾಮರ್‌ಗಳನ್ನು ಅಳವಡಿಸಲಾಗುವುದು ಎಂದು ತಿಳಸಿದೆ.

ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಪ್ರವೇಶಿಸುವುದು, ಗುಂಪುಗೂಡುವುದು, ಸಭೆ-ಸಮಾರಂಭ, ಮೆರವಣಿಗೆಗಳ ಆಯೋಜನೆಯನ್ನು ನಿಷೇಧಿಸಿದೆ.

ಪರೀಕ್ಷಾರ್ಥಿಗಳು ನಿಗದಿಪಡಿಸಿದ ಸಮಯಕ್ಕೆ ಮೊದಲು ಪರೀಕ್ಷಾ ಕೇಂದ್ರದಲ್ಲಿರಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಪ್ರತಿ ಕೊಠಡಿಗೆ ಶುದ್ಧ ಗಾಳಿ, ಬೆಳಕು ಮತ್ತು ಗೋಡೆ ಗಡಿಯಾರದ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ