ರಾಯಚೂರು: 3,21,396 ಮತದಾರರನ್ನು ಕೈಬಿಟ್ಟ ಜಿಲ್ಲಾಡಳಿತ

ರಾಯಚೂರು: 3,21,396 ಮತದಾರರನ್ನು ಕೈಬಿಟ್ಟ ಜಿಲ್ಲಾಡಳಿತ

ರಾಯಚೂರು: 3,21,396 ಮತದಾರರನ್ನು ಕೈಬಿಟ್ಟ ಜಿಲ್ಲಾಡಳಿತ

ರಾಯಚೂರು: ಜಿಲ್ಲೆಯ ಎಲ್ಲ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

‘ಹಿಂದಿನ ಮತದಾರರ ಪಟ್ಟಿಯಿಂದ ಒಟ್ಟು 3,21,396 ಮತದಾರರನ್ನು ತೆಗೆದುಹಾಕಲಾಗಿದೆ. ಅದರಲ್ಲಿ ಮರಣ ಹೊಂದಿದವರು 61,385, ಶಾಶ್ವತವಾಗಿ ಸ್ಥಳಾಂತರಗೊಂಡವರು 1,87,941, ಗೈರು ಮತದಾರರು 30,733 ಹಾಗೂ ಇತರರು 365 ಇದ್ದಾರೆ’ ಎಂದು ನಗರದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಬಾರಿಯ ಕರಡು ಪಟ್ಟಿಯಲ್ಲಿ 3,21,396 (ಶೇ 18.75) ಮತದಾರರ ವ್ಯತ್ಯಾಸವಿದೆ. ಯುವ ಮತದಾರರು (18-19 ವಯಸ್ಸು): 11,56,627 ಜನರು ಕರಡು ಪಟ್ಟಿಯಲ್ಲಿದ್ದಾರೆ. ಅಲ್ಲದೆ ‌17,048 ಅಂಗವಿಕಲರು ಮತದಾರರು ಪಟ್ಟಿಯಲ್ಲಿದ್ದಾರೆ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಹಕ್ಕುಆಕ್ಷೇಪಣೆ ಸಲ್ಲಿಸಲು ಆಗಸ್ಟ್ 27 ರಿಂದ ಅಕ್ಟೋಬರ್ 22 ರ ವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಹೊಸ ಮತದಾರರ ನೋಂದಣಿ: ಅಕ್ಟೋಬರ್ 1, 2026ಕ್ಕೆ 18 ವಯಸ್ಸು ಪೂರ್ಣಗೊಳ್ಳುವ ಹೊಸ ಮತದಾರರು ಫಾರ್ಮ್-6 ಅನ್ನು ಆನ್‌ಲೈನ್ ಮೂಲಕ ಅಥವಾ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸಿಕೊಳ್ಳಬಹುದು. ಎಲ್ಲ ಪರಿಷ್ಕರಣೆ ಹಾಗೂ ಆಕ್ಷೇಪಣೆಗಳ ವಿಲೇವಾರಿಯ ನಂತರ ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್ 27 ರಂದು ಬಿಡುಗಡೆಯಾಗಲಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಹೆಸರುಗಳ ಪರಿಶೀಲನೆ, ವಿಳಾಸ ಬದಲಾವಣೆ ಅಥವಾ ಹೊಸ ಸೇರ್ಪಡೆಗಾಗಿ ನಿಗದಿತ ಅವಧಿಯೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಾಯಚೂರು ಉಪ ವಿಭಾಗಾಧಿಕಾರಿ ಡಾ.ಹಂಪಣ್ಣ ಸಜ್ಜನ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ ಋಶಿಕೇಶಿ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ