ಮೋಡ ಬಿತ್ತನೆಗೆ 3 ಸಮಿತಿ ರಚನೆ, ಸಚಿವ ಚಲುವರಾಯಸ್ವಾಮಿ ಮಾಹಿತಿ

ಮೋಡ ಬಿತ್ತನೆಗೆ 3 ಸಮಿತಿ ರಚನೆ, ಸಚಿವ ಚಲುವರಾಯಸ್ವಾಮಿ ಮಾಹಿತಿ

ಮೋಡ ಬಿತ್ತನೆಗೆ 3 ಸಮಿತಿ ರಚನೆ, ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು: ರಾಜ್ಯದ ಕೆಲವೆಡೆ ತಲೆದೋರಿರುವ ಮಳೆ ಕೊರತೆ ನೀಗಿಸಲು ಎರಡು ದಿನಗಳಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ.

ಬಿತ್ತನೆಯ ಕಾರ್ಯತಂತ್ರಗಳ ಬಗ್ಗೆ ಅಧಿಕಾರಿಗಳು ಮತ್ತು ತಂತ್ರಜ್ಞರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ, ‘ಮೋಡ ಬಿತ್ತನೆ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮೂರು ಸಮಿತಿಗಳನ್ನು ರಚಿಸಲಾಗುವುದು. ಮೇಲ್ವಿಚಾರಣಾ ಸಮಿತಿ, ತಾಂತ್ರಿಕ ಸಮಿತಿ, ಕ್ಷೇತ್ರ ಕಾರ್ಯಾಚರಣೆ ಹಾಗೂ ಮೌಲ್ಯಮಾಪನ ಸಮಿತಿಯ ಮೇಲ್ವಿಚಾರಣೆಯನ್ನು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿರ್ವಹಿಸುವರು’ ಎಂದರು.

‘ತಾಂತ್ರಿಕ ಸಮಿತಿಯಲ್ಲಿ ಐಐಟಿ, ಐಐಎಸ್‌ಸಿ ಹಾಗೂ ಹವಾಮಾನ ಇಲಾಖೆಯ ತಜ್ಞರು ಇರಲಿದ್ದಾರೆ. ಏಕಕಾಲಕ್ಕೆ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ಮೋಡಗಳ ಲಭ್ಯತೆಯ ಆಧಾರದ ಮೇಲೆ ಕಾರ್ಯ ನಡೆಯಲಿದ್ದು, ಬಿತ್ತನೆಯಾದ 15 ಕಿ.ಮೀ ವ್ಯಾಪ್ತಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ₹27 ಕೋಟಿ ವೆಚ್ಚದಲ್ಲಿ 60 ದಿನಗಳು (ಸುಮಾರು 200 ಗಂಟೆ) ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘ರಾಜ್ಯದಲ್ಲಿ ಇದುವರೆಗೆ ಮೂರು ಬಾರಿ ಮೋಡ ಬಿತ್ತನೆ ನಡೆಸಲಾಗಿದೆ. ಶೇ 18ರಿಂದ 20ರಷ್ಟು ಯಶಸ್ಸು ಸಿಕ್ಕಿದೆ. ಈ ಬಾರಿ ಶೇ 30ರಷ್ಟು ಯಶಸ್ಸಿನ ನಿರೀಕ್ಷೆ ಇಟ್ಟುಕೊಂಡಿದ್ದೇವೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260826-51-441948019

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ