ಅಕ್ರಮ ವಲಸಿಗರ ಗಡಿಪಾರಿಗೆ ‘ಆಪರೇಷನ್ ಮುಕ್ತ’: 52 ಬಾಂಗ್ಲಾ ಪ್ರಜೆಗಳ ಬಂಧನ

ಅಕ್ರಮ ವಲಸಿಗರ ಗಡಿಪಾರಿಗೆ ‘ಆಪರೇಷನ್ ಮುಕ್ತ’: 52 ಬಾಂಗ್ಲಾ ಪ್ರಜೆಗಳ ಬಂಧನ

ಅಕ್ರಮ ವಲಸಿಗರ ಗಡಿಪಾರಿಗೆ ‘ಆಪರೇಷನ್ ಮುಕ್ತ’: 52 ಬಾಂಗ್ಲಾ ಪ್ರಜೆಗಳ ಬಂಧನ

ಬೆಂಗಳೂರು: ಅಕ್ರಮ ವಲಸಿಗರ ಪತ್ತೆ ಹಾಗೂ ಗಡಿಪಾರಿಗೆ ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ವಿಶೇಷ ಕಾರ್ಯಾಚರಣೆ ತೀವ್ರಗೊಳಿಸಿರುವ ನಗರ ಪೊಲೀಸರು, ಎಲೆಕ್ಟ್ರಾನಿಕ್ ಸಿಟಿ ಹಾಗೂ ವೈಟ್‌ಫೀಲ್ಡ್‌ ವಿಭಾಗದಲ್ಲಿ ಬಾಂಗ್ಲಾದೇಶದ 52 ಅಕ್ರಮ ವಲಸಿಗರನ್ನು ಭಾನುವಾರ ಬಂಧಿಸಿದ್ದಾರೆ.

ಎರಡೂ ವಿಭಾಗಗಳಲ್ಲಿ ಎರಡು ದಿನದಲ್ಲಿ ಎರಡು ಸಾವಿರಕ್ಕೂ ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಯಿತು. ಶನಿವಾರ 53 ಮಂದಿಯನ್ನು ಬಂಧಿಸಲಾಗಿತ್ತು. ಇದರೊಂದಿಗೆ ಬಂಧಿತರ ಸಂಖ್ಯೆ 105ಕ್ಕೇರಿದೆ.

ಕಾರ್ಯಾಚರಣೆ ವೇಳೆ ವೈಟ್‌ಫೀಲ್ಡ್ ವಿಭಾಗದಲ್ಲಿ 35 ವಿಶೇಷ ತಂಡಗಳು 1,035 ಜನರ ತಪಾಸಣೆ ನಡೆಸಿ 62 ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿದರೆ, ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ 23 ವಿಶೇಷ ತಂಡಗಳು 1,909 ಜನರನ್ನು ತಪಾಸಣೆ ನಡೆಸಿ, 43 ಅಕ್ರಮ ವಲಸಿಗರು ಪತ್ತೆ ಮಾಡಿವೆ. ಎಲ್ಲರನ್ನೂ ಬಂಧಿಸಿ, ನೆಲಮಂಗಲದ ಸೊಂಡೆಕೊಪ್ಪ ಬಳಿಯ ವಲಸಿಗರ ಕೇಂದ್ರಕ್ಕೆ ಕಳುಹಿಸಲಾಗಿದೆ. ವಲಸಿಗರ ಕೇಂದ್ರ ಭರ್ತಿಯಾಗಿರುವ ಕಾರಣ, ಕೆಲ ಸ್ವಯಂ ಸೇವಾ ಸಂಸ್ಥೆಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ.ನಾರಾಯಣ ಅವರ ಮಾರ್ಗದರ್ಶನದಲ್ಲಿ ಪರಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಬಂಡೆಪಾಳ್ಯ, ಹುಳಿಮಾವು ಹಾಗೂ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಎಸಿಪಿಗಳು, ಇನ್‌ಸ್ಪೆಕ್ಟರ್ ಅವರನ್ನು ಒಳಗೊಂಡ 58 ಪ್ರತ್ಯೇಕ ತಂಡಗಳು ಕಾರ್ಯಾಚರಣೆ ನಡೆಸಿದವು.

ಪಶ್ಚಿಮ ಬಂಗಾಳ, ಒಡಿಶಾ, ತ್ರಿಪುರಾ ಸೇರಿದಂತೆ ಅನ್ಯ ರಾಜ್ಯಗಳ ನಿವಾಸಿಗಳು ತಪಾಸಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಪ್ರಸಕ್ತ ವರ್ಷ ಬೇಗೂರು ಸೇರಿದಂತೆ ಹುಳಿಮಾವು ಠಾಣೆಯ ವ್ಯಾಪ್ತಿಯಲ್ಲಿ ದಾಖಲೆಗಳು ಇಲ್ಲದೆ ವಾಸಿಸುತ್ತಿದ್ದ 23 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲಾಗಿದೆ. ಎಫ್‌ಆರ್‌ಆರ್‌ಒ ಸೇರಿ ಇತರೆ ಸಕ್ಷಮ ಪ್ರಾಧಿಕಾರಿಗಳ ಸಹಭಾಗಿತ್ವದಲ್ಲಿ ಅವರನ್ನು ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗಳು ಜಾರಿಯಲ್ಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ