
ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬಸ್-ಆಟೊ ಅಪಘಾತ, 7 ಮಂದಿ ಸಾವು
ಚಿಲಕಲೂರಿಪೇಟ: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಖಾಸಗಿ ಬಸ್ ಮತ್ತು ಆಟೊರಿಕ್ಷಾದ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
‘ಬಸ್ ತಿರುಪತಿ ಕಡೆಗೆ ತೆರಳುತ್ತಿತ್ತು. ತಡರಾತ್ರಿ ಒಂದು ಗಂಟೆ ಸುಮಾರಿಗೆ ಆಟೊ, ಕಲಾಮಂದಿರ ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರಣ ಬಸ್ ಮತ್ತು ಆಟೊ ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ನರಸರಾವುಪೇಟ ಡಿವೈೆಎಸ್ಪಿ ಎಂ. ಹನುಮಂತ ರಾವ್ ತಿಳಿಸಿದರು. ಮೃತರು ಚಿಲಕಲೂರಿಪೇಟ ಮಂಡಲದ ವೇಲೂರು ಗ್ರಾಮದವರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-51-1530921083
Tags
Nation