80ನೇ ಸ್ವಾತಂತ್ರೋತ್ಸವ: ಲೋಕಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

80ನೇ ಸ್ವಾತಂತ್ರೋತ್ಸವ: ಲೋಕಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

80ನೇ ಸ್ವಾತಂತ್ರೋತ್ಸವ: ಲೋಕಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

ಬೆಂಗಳೂರು: 80ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಲೋಕಭವನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಸಾರ್ವಜನಿಕರು ಲೋಕಭವನಕ್ಕೆ ಆಗಸ್ಟ್‌ 16ರಿಂದ 18ರವೆರಗೆ ಮೂರು ದಿನಗಳ ಕಾಲ ಸಂಜೆ 5.30 ರಿಂದ 7.30 ಗಂಟೆಯವರೆಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭೇಟಿ ವೇಳೆ ಸಾರ್ವಜನಿಕರು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಸಹಕಾರ ನೀಡಲು ಕೋರಿದೆ.

* ಲೋಕಭವನ ಪ್ರವೇಶಿಸುವ ಪ್ರತಿಯೊಬ್ಬ ಸಂದರ್ಶಕರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಥವಾ ಸರ್ಕಾರದಿಂದ ನೀಡಲಾದ ಯಾವುದೇ ಗುರುತಿನ ಚೀಟಿಯನ್ನು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗೆ ಪರಿಶೀಲನೆಗಾಗಿ ಪ್ರದರ್ಶಿಸಬೇಕು.

*ಎಲ್ಲಾ ಸಂದರ್ಶಕರು ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡಬೇಕು ಹಾಗೂ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

* ಸಂದರ್ಶಕರಿಗೆ ನಿಗದಿಪಡಿಸಿರುವ ಮಾರ್ಗ ಹಾಗೂ ಸ್ಥಳಗಳಲ್ಲಿ ಮಾತ್ರ ಸಂಚರಿಸಲು ಅನುಮತಿ ಇರುತ್ತದೆ.

* ಸಂದರ್ಶಕರು ಲೋಕಭವನದ ಆವರಣದಲ್ಲಿ ಶಾಂತಿ, ಶಿಸ್ತು ಹಾಗೂ ಸಭ್ಯತೆಯನ್ನು ಕಾಪಾಡಬೇಕು.

*ಖಾಸಗಿ / ಟ್ಯಾಕ್ಸಿ ವಾಹನಗಳಿಗೆ ಲೋಕಭವನದ ಆವರಣದೊಳಗೆ ಪ್ರವೇಶ ಇರುವುದಿಲ್ಲ.

ಕೆಳಕಂಡ ವಸ್ತುಗಳನ್ನು ಲೋಕಭವನದೊಳಗೆ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ:

ಬ್ಯಾಗ್‌ಗಳು ಅಥವಾ ಬ್ಯಾಕ್‌ ಪ್ಯಾಕ್‌ಗಳು, ಆಹಾರ ಪದಾರ್ಥಗಳು, ಪಾನ್, ಗುಟ್ಕಾ, ತಂಬಾಕು ಉತ್ಪನ್ನಗಳು, ಸಿಗರೇಟ್ ಹಾಗೂ ಮದ್ಯ, ವೃತ್ತಿಪರ ಕ್ಯಾಮರಾಗಳು ಹಾಗೂ ವೀಡಿಯೊ ಕ್ಯಾಮರಾಗಳು, ಲ್ಯಾಪ್‌ಟಾಪ್‌ಗಳು ಹಾಗೂ ಇತರೆ ಯಾವುದೇ ವಿದ್ಯುನ್ಮಾನ ಅಥವಾ ವಿದ್ಯುತ್ ಉಪಕರಣಗಳು, ಚೂಪಾದ ಅಥವಾ ಲೋಹದ ವಸ್ತುಗಳು, ಬೆಂಕಿಪೊಟ್ಟಣ, ಲೈಟರ್‌ಗಳು ಹಾಗೂ ಬೆಂಕಿಗೆ ಹೊತ್ತಿಕೊಳ್ಳುವ ವಸ್ತುಗಳು, ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ