
80ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ರಾಮಲಿಂಗಾರೆಡ್ಡಿ
ಕೋಲಾರ: 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಧ್ವಜಾರೋಹಣ ನೆರವೇರಿಸಿದರು.
ತೆರೆದ ಜೀಪಿನಲ್ಲಿ ತೆರಳಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಆನಂತರ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪಥಸಂಚಲನ ಗಮನ ಸೆಳೆಯಿತು.
ವಿವಿಧ ಶಾಲೆಗಳ ಮಕ್ಕಳು ರಾಷ್ಟ್ರೀಯ ಭಾವೈಕ್ಯ ಹಾಗೂ ಏಕತೆಯ ಸಂದೇಶ ಸಾರುವ ನೃತ್ಯ ಪ್ರದರ್ಶಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ಸೊಬಗು ತುಂಬಿದವು.
ಇದಕ್ಕೂ ಮುನ್ನ ಕೋಲಾರ ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.