ಕೆಂಪೇಗೌಡ ವಿಮಾನ ನಿಲ್ದಾಣ: ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನದ ಕ್ಯಾಪ್ಸೂಲ್

ಕೆಂಪೇಗೌಡ ವಿಮಾನ ನಿಲ್ದಾಣ: ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನದ ಕ್ಯಾಪ್ಸೂಲ್

ಕೆಂಪೇಗೌಡ ವಿಮಾನ ನಿಲ್ದಾಣ: ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನದ ಕ್ಯಾಪ್ಸೂಲ್

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದು, ಬಳಿಕ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಪ್ರಯಾಣಿಕ ಮೊಹಮ್ಮದ್ ಸಿರಾಜ್ ಬಾಯಿಯಲ್ಲಿದ್ದ 82 ಗ್ರಾಂ ಚಿನ್ನದ ಕ್ಯಾಪ್ಸೂಲ್‌ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಐಎಸ್‌ಎಫ್ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.

ಬುಧವಾರ ಬೆಳಿಗ್ಗೆ ಟರ್ಮಿನಲ್–1ರ ದೇಶೀಯ ನಿರ್ಗಮನ ವಿಭಾಗದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ.

ದುಬೈನಿಂದ ಇಂಡಿಗೊ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಭಾರತೀಯ ಪ್ರಜೆ ಮೊಹಮ್ಮದ್ ಸಿರಾಜ್, ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧರಾಗಿದ್ದರು.

ತಪಾಸಣೆ ವೇಳೆ ಸಿರಾಜ್ ಭದ್ರತಾ ಸಿಬ್ಬಂದಿಯ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿಲ್ಲ. ಅನುಮಾನಗೊಂಡ ಸಿಐಎಸ್‌ಎಫ್ ಸಿಬ್ಬಂದಿ, ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ತಪಾಸಣೆಗೆ ಒಳಪಡಿಸಿದಾಗ, ಬಾಯಿಯಲ್ಲಿ ಎರಡು ಚಿನ್ನದ ಕ್ಯಾಪ್ಸೂಲ್‌ಗಳು ಪತ್ತೆಯಾಗಿವೆ.

ಹೆಚ್ಚಿನ ತನಿಖೆಗಾಗಿ ಸಿಐಎಸ್‌ಎಫ್ ಸಿಬ್ಬಂದಿ ವಿಮಾನ ನಿಲ್ದಾಣದ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260827-4-1527746814

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ