ಕಲ್ಯಾಣದ 8,706 ಶಾಲಾ ಕೊಠಡಿಗಳು ಶಿಥಿಲ

ಕಲ್ಯಾಣದ 8,706 ಶಾಲಾ ಕೊಠಡಿಗಳು ಶಿಥಿಲ

ಕಲ್ಯಾಣದ 8,706 ಶಾಲಾ ಕೊಠಡಿಗಳು ಶಿಥಿಲ

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಒಟ್ಟು 8,706 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದು, ಇವುಗಳಲ್ಲಿ ಬೋಧನೆ ನಡೆಸದಂತೆ ಶಿಕ್ಷಣ ಇಲಾಖೆಯು ಕಟ್ಟುನಿಟ್ಟಿನ ಸೂಚನೆ ನೀಡಿರುವುದು ಸರ್ಕಾರದ ಅಧಿಕೃತ ದಾಖಲೆಗಳಿಂದ ಗೊತ್ತಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 654 ಪ್ರಾಥಮಿಕ ಶಾಲಾ ಕೊಠಡಿಗಳು, 102 ಪ್ರೌಢಶಾಲಾ ಕೊಠಡಿಗಳು ಸೇರಿ, ಒಟ್ಟು 756 ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಇಂಥ ಕಟ್ಟಡಗಳಿಗೆ ಪರ್ಯಾಯವಾಗಿ ಸುರಕ್ಷಿತ ಕೊಠಡಿಗಳಲ್ಲಿ ಅಥವಾ ಸ್ಥಳೀಯವಾಗಿ ಲಭ್ಯವಿರುವ ಸುರಕ್ಷಿತ ಕಟ್ಟಡಗಳಲ್ಲಿ ತರಗತಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯಶಿಕ್ಷಕರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದೂ ಸರ್ಕಾರ ಒಪ್ಪಿಕೊಂಡಿದೆ.

ಕೈಗೊಂಡ ಕ್ರಮಗಳು: ಶಾಲಾ ಪ್ರಾರಂಭೋತ್ಸವಕ್ಕೂ ಮುನ್ನವೇ ಎಲ್ಲ ಜಿಲ್ಲೆಗಳ ಶಾಲಾ ಕಟ್ಟಡಗಳ ಸುರಕ್ಷತೆ ಪರಿಶೀಲನೆ ಪೂರ್ಣಗೊಳಿಸಿ, ಮಕ್ಕಳ ಮುಂಜಾಗ್ರತೆಯಾಗಿ ಶಿಥಿಲ ಕೊಠಡಿಗಳ ಬಳಕೆಯನ್ನು ಆರಂಭದಿಂದಲೇ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಈ ಸೂಚನೆ ಉಲ್ಲಂಘಿಸಿ ಶಿಥಿಲ ಕೊಠಡಿ ಬಳಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದೂ ಸೂಚನೆ ನೀಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.

ದುರಸ್ತಿ, ಮರುನಿರ್ಮಾಣಕ್ಕೆ ಅನುದಾನ: ಕಟ್ಟಡ ಸುರಕ್ಷತಾ ಸಮೀಕ್ಷೆಯ ಪ್ರಮಾಣ ಪತ್ರದ ಆಧಾರದ ಮೇರೆಗೆ ಗುರುತಿಸಲಾದ ಅಸುರಕ್ಷಿತ/ಶಿಥಿಲ ಕೊಠಡಿಗಳು, ವಿದ್ಯಾರ್ಥಿ–ತರಗತಿ–ಕೊಠಡಿ ಅನುಪಾತದ ಆಧಾರದಲ್ಲಿ ಅಗತ್ಯವಿರುವ ಕೊಠಡಿಗಳ ದುರಸ್ತಿ ಅಥವಾ ಮರುನಿರ್ಮಾಣಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಪಿ.ಎಂ.ಶ್ರೀ ಯೋಜನೆಯಡಿ ಜಿಲ್ಲೆಗಳಿಂದ ಬರುವ ಪ್ರಸ್ತಾವನೆಗಳನ್ನು ಆಧರಿಸಿ ಅರ್ಹತೆ ಮತ್ತು ಆದ್ಯತೆಯಂತೆ ಕ್ರಿಯಾಯೋಜನೆ ರೂಪಿಸಿ, ಅನುದಾನದ ಲಭ್ಯತೆಗೆ ಅನುಗುಣವಾಗಿ ಅನುಮೋದನೆ ನೀಡಿ ಮೂಲಸೌಲಭ್ಯಗಳನ್ನು ಒದಗಿಸಿ ಕೊರತೆಯನ್ನು ನೀಗಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಇದರ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳ ಅಸುರಕ್ಷಿತ ಕೊಠಡಿಗಳ ದುರಸ್ತಿ ಮತ್ತು ಮರುನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನ ಹಾಗೂ ಗಣಿಬಾಧಿತ ಪ್ರದೇಶದ ಜಿಲ್ಲೆಗಳಲ್ಲಿ ಸಿಇಪಿಎಂಐಝಡ್‌ ಯೋಜನೆಯ ಅನುದಾನದಿಂದಲೂ ಜಿಲ್ಲೆಗಳಿಂದ ಬರುವ ಪ್ರಸ್ತಾವನೆಗಳ ಆಧಾರದಲ್ಲಿ ಅರ್ಹತೆ ಮತ್ತು ಆದ್ಯತೆಯಂತೆ ಕ್ರಿಯಾಯೋಜನೆ ರೂಪಿಸಿ ಮೂಲಸೌಲಭ್ಯಗಳ ಕೊರತೆ ನೀಗಿಸುತ್ತಿರುವುದಾಗಿ ಸರ್ಕಾರ ತಿಳಿಸಿದೆ.

ಸಂಗನಕಲ್ಲು ಶಾಲೆಗಿಲ್ಲ ಶೌಚಾಲಯ

ಬಳ್ಳಾರಿ: ತಾಲೂಕಿನ ಸಂಗನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಯಿಂದ 8 ನೇ ತರಗತಿಯವರೆಗೆ ಒಟ್ಟು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಶಾಲೆಯಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಹಾಗೂ ತರಗತಿ ಕೊಠಡಿಗಳ ತೀವ್ರ ಅಭಾವವಿದೆ.

ಈ ಕುರಿತು ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಂಬಂಧಪಟ್ಟ ಮೇಲಧಿಕಾರಿಗಳು ತಕ್ಷಣವೇ ಗಮನಹರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260824-25-1484363961

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ