
ಬೆಂಗಳೂರು: ಕಾರಿನಲ್ಲಿ ₹ 9 ಕೋಟಿ ಪತ್ತೆ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಕಾರಿನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ₹9 ಕೋಟಿಯನ್ನು ಜಪ್ತಿ ಮಾಡಿದ್ದಾರೆ.
ಸಿಂಧೂ ಚಿನ್ನಾಭರಣ ಅಂಗಡಿ ಮಾಲೀಕ ಸಚಿನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಚಿನ್ ಮನೆಯಲ್ಲೂ ₹1.3 ಕೋಟಿ ಪತ್ತೆಯಾಗಿದೆ. ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಹಣದ ಮೂಲ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.