
Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್ 9ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಆಗಸ್ಟ್ 9) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,599 ರೂಪಾಯಿ
* ಗರಿಷ್ಠ - 61,599 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 39,500 ರೂಪಾಯಿ
* ಗರಿಷ್ಠ - 42,854 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,599 ರೂಪಾಯಿ
* ಗರಿಷ್ಠ - 54,199 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 75,659 ರೂಪಾಯಿ
* ಗರಿಷ್ಠ - 87,200 ರೂಪಾಯಿ