Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಆಗಸ್ಟ್‌ 30ರ ಭಾನುವಾರ ಕರೆಂಟ್ ಕಟ್

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಆಗಸ್ಟ್‌ 30ರ ಭಾನುವಾರ ಕರೆಂಟ್ ಕಟ್

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಆಗಸ್ಟ್‌ 30ರ ಭಾನುವಾರ ಕರೆಂಟ್ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಆಗಸ್ಟ್‌ 30ರ ಭಾನುವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಕರೆಂಟ್ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಐಐಎಸ್‌ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ (ಆಗಸ್ಟ್‌ 30) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಭಾನುವಾರ ಎಲ್ಲೆಲ್ಲಿ ಕರೆಂಟ್ ಕಟ್?

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ಅಲ್ಲದೆ, ಅಂದೇ 220/66/11 ಕೆ.ವಿ. ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶನಿವಾರ ಎಲ್ಲೆಲ್ಲಿ ವಿದ್ಯುತ್ ಕಡಿತ?

ಕೆಪಿಟಿಸಿಎಲ್ ವತಿಯಿಂದ ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಶನಿವಾರ (ಆಗಸ್ಟ್‌ 29) ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ಎರಡನೇ ತ್ರೈಮಾಸಿಕ ನಿರ್ವಹಣೆಗಾಗಿ ಎಲ್‌ಸಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜನಕುಂಟೆ, ಕಾಡುಗೋಡಿ ಉಪಕೇಂದ್ರ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋಡೋನ್, ಸಫಲ್, ಶಂಕ್ರಪುರ, ಸಿದ್ದಾರ್ಥ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆಪ್ಟ್, ಮಾರ್ವೆಲ್ ಆಪ್ಟ್, ಇಮ್ಮಡಿ ಹಳ್ಳಿ, ಕೈತೋಟ, ದಿಣ್ಣೂರು, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯರಸ್ತೆ, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯರಸ್ತೆ, ಇಸಿಸಿ ರಸ್ತೆ, ನಾಯ್ಡು ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಭೈರವೇಣಯ್ಯ ದೇವಸ್ಥಾನ ರಸ್ತೆ, ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ, ಪ್ರೆಸ್ಟೀಜ್ ಮೇಬರಿ ಆಪ್ಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಹೊರ ವೃತ್ತ, ಹಗದೂರು, ಬೀರ್ ಸ್ಟ್ರೀಟ್, ಬ್ರೂಕ್ ಬಾಂಡ್, ಹಗದೂರು ಕೇನ್, ವಿನಾಯಕನಗರ, ಬ್ರಿಗೇಡ್ ಕಾಸ್ಮೊ ಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯ ರಸ್ತೆ, ದೊಬರಪಾಳ್ಯ, ಸುಮಧುರ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಸಾರ್ವಜನಿಕರು ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್‌ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ಸಾರ್ವಜನಿಕರು ಸಹಕರಿಸಬೇಕು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಸಂಪರ್ಕಿಸಬಹುದು ಅಂತಲೂ ಸಲಹೆ ನೀಡಿದೆ.

power cut bescom kptcl

power cut bescom kptcl

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ