Bengaluru Property: ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ!

Bengaluru Property: ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ!

Bengaluru Property: ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ!

Bengaluru Property: ಬೆಂಗಳೂರಿನ ಆಸ್ತಿದಾರರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದ ಒಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಬೇಕಾಗುತ್ತದೆ. ಒಂದೊಮ್ಮೆ ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ.

ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆದುಕೊಳ್ಳಲಿದ್ದೇವೆ. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ, ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ. ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ.

ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯುವ ವಾಹನಗಳಿಗೆ ನೋಟೀಸ್ ಕೊಡಲಾಗಿತ್ತು. ಕ್ಯಾಮೆರಾ ಕಣ್ಗಾವಲು ಇಡಲಾಗಿತ್ತು. ಈಗ ಮತ್ತೆ ಯತಾಸ್ಥಿತಿಯಲ್ಲಿ ಕಸ ಸುರಿಯುತ್ತಿದ್ದಾರೆ. ಅನುಮತಿ ಇಲ್ಲದೇ ಕಸ ಸುರಿಯುವವರ ವಾಹನವನ್ನು ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನಾನು ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ ಎಂದೂ ಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಾವು ಮಾಡುವ ಕೆಲಸ ಶಾಶ್ವತವಾಗಿ ಉಳಿಯುತ್ತದೆ, ಟೀಕೆಗಳು ಸಾಯುತ್ತವೆ. ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ. ಯಾರಾದರೂ ಇದನ್ನು ಅಧಿಕಾರಿಗಳ ಮೇಲೆ ದಾಳಿ ಎಂದು ಭಾವಿಸಿದ್ದರೆ ಅದು ಭ್ರಮೆ. ಇದು ಸರ್ಕಾರ, ಸಚಿವರು ಹಾಗೂ ಶಾಸಕರ ಮೇಲಿನ ದಾಳಿ ಎಂದೇ ಭಾವಿಸುತ್ತೇವೆ. ನಾವು ಎಲ್ಲಾ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.

Bengaluru Property: ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳಿಗೆ ಗುಡ್‌ನ್ಯೂಸ್

ಇನ್ನು ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಗುಡ್‌ನ್ಯೂಸ್ ಕೊಡಲಾಗಿದೆ. ಬೀದಿವ್ಯಾಪಾರ ಮಾಡುವವರಿಗೆ ಬೇರೆ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು. ಬೀದಿ ವ್ಯಾಪಾರಿಗಳು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಮಾಡಲು ಸಾಧ್ಯವಿಲ್ಲ.

ಇಂದಿನಿಂದ ಆರಂಭವಾಗುತ್ತಿರುವ ಈ ಅಭಿಯಾನ ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ. ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ಅಭಿಯಾನ ಕೈಗೆತ್ತಿಕೊಳ್ಳಬೇಕು. ಇದು ನಿಮ್ಮ ಬೆಂಗಳೂರು, ಇಡೀ ದೇಶ ನಿಮ್ಮನ್ನು ಗಮನಿಸುತ್ತಿದೆ. ಅನೇಕ ರಾಷ್ಟ್ರೀಯ ನಾಯಕರು ಅನೇಕ ಮಾರ್ಗದರ್ಶನ ನೀಡಿದ್ದು, ಅದನ್ನು ಮುಂದುವರಿಸಿಕೊಂಡು ಹೋಗೋಣ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

property real estate namma bengaluru

property real estate namma bengaluru

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ