Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್‌ಗೆ ಎಐ ಬಳಕೆ: ಪೊಲೀಸ್ ಇಲಾಖೆ ಹೇಳಿದ್ದೇನು

Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್‌ಗೆ ಎಐ ಬಳಕೆ: ಪೊಲೀಸ್ ಇಲಾಖೆ ಹೇಳಿದ್ದೇನು

Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್‌ಗೆ ಎಐ ಬಳಕೆ: ಪೊಲೀಸ್ ಇಲಾಖೆ ಹೇಳಿದ್ದೇನು

Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರದಲ್ಲಿ ವೈಯಕ್ತಿಕ ವಾಹನಗಳ ಬಳಕೆಯೂ ಸಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರೊಂದಿಗೆ ಬೆಂಗಳೂರಿನ ನಮ್ಮ ಮೆಟ್ರೋದ ಬೆಲೆ ಏರಿಕೆ ಹಾಗೂ ಹಲವು ಕಚೇರಿಗಳು ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ ಮಾಡುವ) ಆಯ್ಕೆಯನ್ನು ತೆಗೆದು ಹಾಕಿರುವುದು ಸೇರಿದಂತೆ ಹಲವು ಕಾರಣಗಳಿಗೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ವಿಪರೀತ ಎನ್ನುವಷ್ಟು ಹೆಚ್ಚಳವಾಗಿದೆ.

ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯೂ ಸಹ ಕೈಜೋಡಿಸಿದ್ದು, (Artificial Intelligence) ಕೃತಕ ಬುದ್ಧಿಮತ್ತೆಯನ್ನು ಹೆಚ್ಚು ಬಳಸಿಕೊಳ್ಳುವುದಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್ ಮಾಡುವುದಕ್ಕೆ ಬೆಂಗಳೂರು ನಗರ ಪೊಲೀಸರು (Artificial Intelligence) ಕೃತಕ ಬುದ್ಧಿಮತ್ತೆ ಮೊರೆ ಹೋಗಿದ್ದಾರೆ. ಅಲ್ಲದೆ ಈ ಸಂಬಂಧ ಮಹತ್ವದ ಅಪ್ಡೇಟ್ಸ್‌ ಸಹ ನೀಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ನಗರದ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS)ಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಂತ್ರಜ್ಞಾನ ಆಧಾರಿತ ಹಲವು ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದ್ದು, ಸಂಚಾರ ನಿರ್ವಹಣೆಯನ್ನು ಮತ್ತಷ್ಟು ತ್ವರಿತವಾಗಿ ಸ್ಪಂದಿಸುವ ವ್ಯವಸ್ಥೆಯನ್ನಾಗಿ ರೂಪಿಸಲು ಕೃತಕ ಬುದ್ಧಿಮತ್ತೆ (AI), ದತ್ತಾಂಶ ವಿಶ್ಲೇಷಣೆ, ವಾಹನಗಳ ಸಂಚಾರ ಮಾದರಿಗಳು ಹಾಗೂ ಈಗಿರುವ CCTV ಕ್ಯಾಮೆರಾ ಮೂಲಸೌಕರ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಮಹತ್ವದ ಚರ್ಚೆ ನಡೆಸಿರುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

Bengaluru Traffic: ಬೆಂಗಳೂರು ಟ್ರಾಫಿಕ್ ಜಾಮ್‌ ಕಂಟ್ರೋಲ್‌ಗೆ ಎಐ

AI ಆಧಾರಿತ ಸಂಚಾರ ದಟ್ಟಣೆ ಮುನ್ಸೂಚನೆ, ಅಗತ್ಯಕ್ಕೆ ಅನುಗುಣವಾಗಿ ಮಾರ್ಗ ಬದಲಾವಣೆ, ಜಂಕ್ಷನ್‌ಗಳ ಕಾರ್ಯಕ್ಷಮತೆಯ ವಿಶ್ಲೇಷಣೆ ಹಾಗೂ ದತ್ತಾಂಶ ಆಧಾರಿತ ಸಂಚಾರ ಸುಧಾರಣೆ ಸೇರಿದಂತೆ ವಿವಿಧ ಪರಿಹಾರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಇದರ ಮೂಲಕ ಹೆಚ್ಚಿನ ಸಂಖ್ಯೆಯ ವಾಹನಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಂಚರಿಸುವಂತೆ ಮಾಡುವುದು, ಸಂಚಾರದ ಅಡಚಣೆಗಳನ್ನು ಅವು ಗಂಭೀರ ಸ್ವರೂಪ ಪಡೆಯುವ ಮುನ್ನವೇ ಗುರುತಿಸಿ ಪರಿಹರಿಸುವುದು ನಮ್ಮ ಉದ್ದೇಶವಾಗಿದೆ.

ಬೆಂಗಳೂರು ನಗರ ಸಂಚಾರ ವ್ಯವಸ್ಥೆಯಲ್ಲಿ ಸುಸ್ಥಿರ ಸುಧಾರಣೆಗಳನ್ನು ತರುವ ನಮ್ಮ ನಗರ ಸಂಚಾರ ಮಿಷನ್‌ನ ಪ್ರಮುಖ ಆಧಾರಸ್ತಂಭಗಳಲ್ಲಿ ಇವು ಒಂದಾಗಿದೆ. ತಂತ್ರಜ್ಞಾನ ಮತ್ತು ದತ್ತಾಂಶದ ಪರಿಣಾಮಕಾರಿ ಬಳಕೆಯ ಮೂಲಕ ಬೆಂಗಳೂರಿನ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮ, ದಕ್ಷ ಮತ್ತು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಗಂಭೀರವಾಗಿರುವ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್ ಮಾಡುವುದಕ್ಕೆ ಕೊನೆಗೂ ಪರಿಹಾರ ಕಂಡಿಕೊಳ್ಳಲು ಮಹತ್ವದ ಹೆಜ್ಜೆ ಇರಿಸಲಾಗಿದೆ.

namma bengaluru bengaluru traffic priyank kharge

namma bengaluru bengaluru traffic priyank kharge

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ