ಮಸ್ಕಿ ಹೆದ್ದಾರಿ ಕಾಮಗಾರಿ ವಿಳಂಬ, ಸಾರ್ವಜನಿಕರಿಗೆ ತೊಂದರೆ

ಮಸ್ಕಿ ಹೆದ್ದಾರಿ ಕಾಮಗಾರಿ ವಿಳಂಬ, ಸಾರ್ವಜನಿಕರಿಗೆ ತೊಂದರೆ

ಮಸ್ಕಿ ಹೆದ್ದಾರಿ ಕಾಮಗಾರಿ ವಿಳಂಬ, ಸಾರ್ವಜನಿಕರಿಗೆ ತೊಂದರೆ

ಮಸ್ಕಿ: ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರ ನಡುವಿನ ತಿಕ್ಕಾಟದಿಂದಾಗಿ ಹೆದ್ದಾರಿ ಕಾಮಗಾರಿ ವರ್ಷಗಳು ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಪಟ್ಟಣದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಿ, ಭಾರಿ ವಾಹನಗಳನ್ನು ಪಟ್ಟಣದ ಹೊರವಲಯದಲ್ಲಿಯೇ ಸಾಗಿಸುವ ಉದ್ದೇಶದಿಂದ ರೂಪಿಸಲಾಗಿರುವ ಮಸ್ಕಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಯೋಜನೆ ಇದೀಗ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವಿನ ತಿಕ್ಕಾಟದಿಂದ ಹೈಕೋರ್ಟ್ ಮೆಟ್ಟಿಲೇರಿದ್ದು, ಬೈಪಾಸ್ ರಸ್ತೆ ಪಟ್ಟಣದ ಜನರಿಗೆ ‘ಗಗನಕುಸುಮ’ವಾಗಿ ಪರಿಣಮಿಸಿದೆ.

ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ಮಸ್ಕಿ ಪಟ್ಟಣದ ಮೂಲಕ ಪ್ರತಿನಿತ್ಯ ನೂರಾರು ಭಾರಿ ವಾಹನಗಳು ಸಂಚರಿಸುತ್ತವೆ. ಲಾರಿ, ಟಿಪ್ಪರ್, ಬಸ್ ಸೇರಿದಂತೆ ಭಾರಿ ವಾಹನಗಳ ಸಂಚಾರದಿಂದ ಪಟ್ಟಣದ ಮುಖ್ಯರಸ್ತೆಯಲ್ಲಿ ಆಗಾಗ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಪಘಾತಗಳ ಆತಂಕವೂ ಜನರನ್ನು ಕಾಡುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿರೀಕ್ಷೆಯೊಂದಿಗೆ ಬೈಪಾಸ್ ರಸ್ತೆ ಯೋಜನೆ ರೂಪಿಸಲಾಗಿತ್ತು.

ಆದರೆ, ಯೋಜನೆ ಅನುಷ್ಠಾನದ ಹಂತದಲ್ಲಿ ಎದುರಾದ ಸಮಸ್ಯೆಗಳು, ಹೆದ್ದಾರಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವಿನ ಭಿನ್ನಾಭಿಪ್ರಾಯದಿಂದ ಕಾಮಗಾರಿ ನಿರೀಕ್ಷಿತ ವೇಗ ಪಡೆಯಲಿಲ್ಲ. ಇದೀಗ ವಿವಾದ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಕಾಮಗಾರಿ ಯಾವಾಗ ಆರಂಭವಾಗಿ, ಯಾವಾಗ ಪೂರ್ಣಗೊಳ್ಳಲಿದೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಇಲ್ಲದಂತಾಗಿದೆ.

ಬೈಪಾಸ್ ರಸ್ತೆ ನಿರ್ಮಾಣವಾದರೆ ಪಟ್ಟಣದೊಳಗಿನ ಭಾರಿ ವಾಹನಗಳ ಸಂಚಾರ ಗಣನೀಯವಾಗಿ ಕಡಿಮೆಯಾಗಲಿದೆ. ಮುಖ್ಯರಸ್ತೆಯಲ್ಲಿ ಸಂಚಾರ ಸುಗಮವಾಗುವುದರ ಜೊತೆಗೆ ಅಪಘಾತಗಳ ಸಾಧ್ಯತೆಯೂ ಕಡಿಮೆಯಾಗಲಿದೆ. ಆದರೆ ವರ್ಷಗಳು ಉರುಳುತ್ತಿದ್ದರೂ ಯೋಜನೆ ಕಾರ್ಯರೂಪಕ್ಕೆ ಬಾರದಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಮಸ್ಕಿ–ಸಿಂಧನೂರು ಮಾರ್ಗದಲ್ಲಿನ ಸೇತುವೆಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಪಟ್ಟಣದ ರಸ್ತೆ ವಿಭಜಕ ಕಾಮಗಾರಿಯೂ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ. ಇದರ ನಡುವೆಯೇ ಮಹತ್ವದ ಬೈಪಾಸ್ ಯೋಜನೆಯೂ ಕಾನೂನು ವಿವಾದದಲ್ಲಿ ಸಿಲುಕಿರುವುದು ಹೆದ್ದಾರಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ.

‘ಜನಪ್ರತಿನಿಧಿಗಳ ನಿರಾಸಕ್ತಿ’

ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಎದುರಾಗಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಸಂಸದರು ಹಾಗೂ ಶಾಸಕರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಇದರಿಂದಾಗಿ ಕಾಮಗಾರಿ ತೆವಳುತ್ತ ಸಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ನ್ಯಾಯಾಲಯದಲ್ಲಿರುವ ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಅಗತ್ಯ ಕ್ರಮಕೈಗೊಂಡು, ಬೈಪಾಸ್ ಯೋಜನೆಗೆ ಮರುಜೀವ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260824-32-1916039014

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ