ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಯಾವಾಗ?

ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಯಾವಾಗ?

ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಯಾವಾಗ?

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆ ರಚನೆಯಾಗಿ 19 ವರ್ಷ ಕಳೆದರೂ, ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಇಲ್ಲದೆ ಇಂದಿಗೂ ಕೋಲಾರ ಡಿಸಿಸಿ ಬ್ಯಾಂಕ್ ಜೊತೆಯೇ ಕಾರ್ಯನಿರ್ವಹಿಸುತ್ತಿದೆ.

ಜಿಲ್ಲೆ ರಚನೆಯಾದ ಸಂದರ್ಭದಲ್ಲಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಕನಸು ನನಸಾಗುತ್ತದೆ ಎಂದು ರೈತರು ಖುಷಿಯಾಗಿದ್ದರು. ಮೂರ್ನಾಲ್ಕು ವರ್ಷಗಳ ಹೋರಾಟದ ನಂತರ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ ಈಡೇರಿದೆ. ಆದರೆ, ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸಾಗಿಯೇ ಉಳಿದಿದೆ.

ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದು. ರೈತರಿಗೆ ಅಲ್ಪಾವಧಿ, ಧೀರ್ಘಾವಧಿ, ಬೆಳೆ ಸಾಲ, ಮಹಿಳಾ ಸ್ವಸಹಾಯ ಸಂಘಗಳಿಗೆ ಸುಲಭವಾಗಿ ಇಲ್ಲಿ ಸಾಲ ದೊರೆಯುತ್ತದೆ. ರೈತರ ಸಾಲ ಮನ್ನಾ ಕೂಡ ಸಹಕಾರಿ ಬ್ಯಾಂಕ್‌ಗಳ ಮೂಲಕವೇ ಹೆಚ್ಚಾಗಿರುತ್ತದೆ. ಡಿಸಿಸಿ ಬ್ಯಾಂಕ್ ಸಹಕಾರದಿಂದಲೇ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಸಂಘಗಳು ವ್ಯವಹಾರ ನಡೆಸುತ್ತವೆ.

ಈಗಾಗಲೇ ಕೋಲಾರ ಡಿಸಿಸಿ ಬ್ಯಾಂಕ್ ಅವ್ಯವಹಾರ ಆರೋಪದ ಸುಳಿಯಲ್ಲಿ ಸಿಲುಕಿ ಏದುಸಿರು ಬಿಡುತ್ತಿದೆ. ಕೋಲಾರ ಡಿಸಿಸಿ ಬ್ಯಾಂಕಿನ ಅಧಿಕಾರಿಗಳು ಮತ್ತು ಅಂದಿನ ಆಡಳಿತ ಮಂಡಳಿಯ ವಿರುದ್ಧ ಅನೇಕ ದೂರುಗಳು ದಾಖಲಾಗಿವೆ. ಚಿಂತಾಮಣಿ ತಾಲ್ಲೂಕಿನಲ್ಲೇ 7 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು ಸಿಐಡಿ ತನಿಖೆ ನಡೆಯುತ್ತಿದೆ. ಆರೋಪಿಗಳು ಮೊದಲಿಗೆ ಹೈಕೋರ್ಟ್‌ನಿಂದ ತನಿಖೆಗೆ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆ ತೆರವುಗೊಂಡು ತನಿಖೆ ಚುರುಕಾದ ಕೂಡಲೇ ಇದೀಗ ಸುಪ್ರೀಂಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದು ಆರೋಪದ ಮಹತ್ವವನ್ನು ಸೂಚಿಸುತ್ತದೆ.

ಪ್ರಸ್ತುತ ಆರೋಪಗಳ ಸುಳಿಯಲ್ಲಿ ಸಿಲುಕಿರುವ ಕೋಲಾರ ಡಿಸಿಸಿ ಬ್ಯಾಂಕಿನಿಂದ ರೈತರಿಗೆ, ಹಾಲು ಉತ್ಪಾದಕರಿಗೆ, ಮಹಿಳಾ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳಿಗೆ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಹಾಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಿ ಎಂಬುದು ರೈತ ಸಂಘಟನೆಗಳ ಒತ್ತಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-16-1411133347

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ