ಇಸ್ಲಾಂ ಶ್ರೇಷ್ಠ ಧರ್ಮ ಹೇಳಿಕೆ: ಸಚಿವ ಬಸವರಾಜ ರಾಯರಡ್ಡಿ ಕ್ಷಮೆಗೆ ಬಿಜೆಪಿ ಆಗ್ರಹ

ಇಸ್ಲಾಂ ಶ್ರೇಷ್ಠ ಧರ್ಮ ಹೇಳಿಕೆ: ಸಚಿವ ಬಸವರಾಜ ರಾಯರಡ್ಡಿ ಕ್ಷಮೆಗೆ ಬಿಜೆಪಿ ಆಗ್ರಹ

ಇಸ್ಲಾಂ ಶ್ರೇಷ್ಠ ಧರ್ಮ ಹೇಳಿಕೆ: ಸಚಿವ ಬಸವರಾಜ ರಾಯರಡ್ಡಿ ಕ್ಷಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ‘ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಗಳಿಗೆ ಹೋಗುವುದಿಲ್ಲ’ ಎಂಬ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ರಾಯರಡ್ಡಿ ಅವರು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ಈ ಕೂಡಲೇ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ, ಧರ್ಮದ ಬಗ್ಗೆ ಪ್ರತಿಯೊಬ್ಬರಿಗೂ ಅವರದೇ ಆದ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವುದು ಸೂಕ್ತವಲ್ಲ’ ಎಂದು ಹೇಳಿದ್ದಾರೆ.

‘ಮುಖ್ಯಮಂತ್ರಿಗಳ ಮೌನ ಏಕೆ?’

ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಅಶೋಕ ತರಾಟೆಗೆ ತೆಗೆದುಕೊಂಡಿದ್ದಾರೆ.

‘ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ನಾಟಕ ಆಡುವ ನಿಮಗೆ, ಅಧಿಕಾರಕ್ಕೆ ಬಂದ ಬಳಿಕ ನಿಮ್ಮದೇ ಸಂಪುಟದ ಸಚಿವರು ಹಿಂದೂ ಧರ್ಮವನ್ನು ಅವಹೇಳನ ಮಾಡಿದಾಗ ಮೌನ ವಹಿಸುವುದೇಕೆ?’ ಎಂದು ಪ್ರಶ್ನಿಸಿದ್ದಾರೆ.

‘ರಾಯರಡ್ಡಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಬಹಿರಂಗವಾಗಿ ಖಂಡಿಸಬೇಕು. ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಸಚಿವರಿಂದ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು. ಇದಕ್ಕೆ ಅವರು ಸಿದ್ಧರಿಲ್ಲದಿದ್ದರೆ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಅಶೋಕ ಒತ್ತಾಯಿಸಿದ್ದಾರೆ.

‘ಈ ಎರಡರಲ್ಲಿ ಯಾವುದನ್ನೂ ಮಾಡದಿದ್ದರೆ ರಾಜ್ಯದ ಕೋಟ್ಯಂತರ ಹಿಂದೂಗಳು ಕೇಳುತ್ತಿರುವ ಪ್ರಶ್ನೆಗಳಿಗೆ ನಿಮ್ಮ ಮೌನವೇ ಉತ್ತರವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಭಾನುವಾರ ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಯರಡ್ಡಿ, ಬೇರೆ ಎಲ್ಲ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ. ಮಠಮಾನ್ಯಗಳಿಗೆ ಹೆಚ್ಚು ಹೋಗಬಾರದು. ನಾನು ಹೋಗುವುದಿಲ್ಲ’ ಎಂದು ಹೇಳಿದ್ದರು.

ಇಸ್ಲಾಂ ಧರ್ಮ ವೈಜ್ಞಾನಿಕವಾಗಿದ್ದು, ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಅದು ತಿಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ