
ಪ್ರಕರಣ ವಾಪಸ್: ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ
ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ, ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್, ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸಮಿತಿಯ ಸದಸ್ಯರು.
ಈ ಸಮಿತಿಗೆ ಒಳಾಡಳಿತ ಇಲಾಖೆಯು ಅಗತ್ಯ ನೆರವು ನೀಡಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260830-51-387409960