
ಹಗರಿಬೊಮ್ಮನಹಳ್ಳಿ: ಮೀನು ಹಿಡಿಯಲು ಹೋದ ಮೂವರು ನಾಪತ್ತೆ, ಒಬ್ಬನ ಮೃತದೇಹ ಪತ್ತೆ
ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಂಗಳವಾರ ರಾತ್ರಿ ನಾಪತ್ತೆಯಾಗಿದ್ದರು, ಬುಧವಾರ ಬೆಳಿಗ್ಗೆ ಒಬ್ಬನ ಮೃತದೇಹ ಪತ್ತೆಯಾಗಿದೆ.
ಮಡಿವಾಳರ ರಾಜ(22), ಮಡಿವಾಳರ ಯಮನೂರಪ್ಪ(20), ಮಡಿವಾಳರ ಅಜ್ಜಪ್ಪ(26) ಕಾಣೆಯದವರು. ಈ ಪೈಕಿ ಯಮನೂರಪ್ಪ ಅವರ ಮೃತದೇಹ ಪತ್ತೆಯಾಗಿದೆ.
ಈ ಕುರಿತಂತೆ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ. ಕಾಣೆಯವದರ ಸಂಬಂಧಿ ಮಡಿವಾಳರ ನಾಗರಾಜ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾದ ಸ್ಥಳದಲ್ಲಿ ಅಗ್ನಿಶಾಮಕದಳದವರು ಪತ್ತೆ ಕಾರ್ಯ ಕೈಗೊಂಡಿದ್ದಾರೆ, ಎಸ್ ಡಿ ಆರ್ ಎಫ್ ತಂಡವೂ ಸ್ಥಳಕ್ಕೆ ಆಗಮಿಸುತ್ತಿದ್ದು ಹುಡುಕಾಟ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.