ಹುಲಸೂರು: ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಟ, ಮೂಲಸೌಕರ್ಯ ಕೊರತೆ

ಹುಲಸೂರು: ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಟ, ಮೂಲಸೌಕರ್ಯ ಕೊರತೆ

ಹುಲಸೂರು: ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಟ, ಮೂಲಸೌಕರ್ಯ ಕೊರತೆ

ಹುಲಸೂರ: ತಾಲ್ಲೂಕು ಕೇಂದ್ರ ಘೋಷಣೆಯಾಗಿ 9 ವರ್ಷಗಳು ಕಳೆದಿವೆ. ಸಾರ್ವಜನಿಕ ಶೌಚಾಲಯದ ಕೊರತೆ ಹಾಗೂ ಬೀದಿ ದೀಪಗಳು ಬೆಳಗದಿರುವುದು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ.

ಪಟ್ಟಣದ 12 ವಾರ್ಡ್‌ಗಳಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಸುತ್ತಲಿನ 20 ಗ್ರಾಮಗಳ ಜನರು ಸಂತೆ, ವ್ಯಾಪಾರ, ಬ್ಯಾಂಕಿಂಗ್ ಹಾಗೂ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಪಟ್ಟಣಕ್ಕೆ ಭೇಟಿ ನೀಡುತ್ತಾರೆ. ನಿತ್ಯ 20ರಿಂದ 30 ಬಸ್‌ಗಳು ಸಂಚರಿಸುತ್ತವೆ. ಆದರೆ, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಶೌಚಾಲಯ ವ್ಯವಸ್ಥೆಯಿಲ್ಲ. ಮಹಿಳೆಯರು, ಯುವತಿಯರು, ವೃದ್ಧರು, ಮಕ್ಕಳು, ವಿದ್ಯಾರ್ಥಿನಿಯರು, ಕಾರ್ಮಿಕರು, ಅಂಗವಿಕಲರು ಹಾಗೂ ಗ್ರಾಮೀಣ ಭಾಗದಿಂದ ಬರುವ ಜನರು ತೀವ್ರ ಮುಜುಗರ ಮತ್ತು ಸಂಕಷ್ಟ ಎದುರಿಸುವಂತಾಗಿದೆ.

ರಸ್ತೆ ಬದಿ ಹಾಗೂ ಖಾಲಿ ಜಾಗಗಳಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಪರಿಸರದ ಮೇಲೂ ಪರಿಣಾಮ ಬೀರುತ್ತಿದೆ. ಇದರಿಂದ ದುರ್ವಾಸನೆ ಹಾಗೂ ನೈರ್ಮಲ್ಯದ ಕೊರತೆ ಹೆಚ್ಚುತ್ತಿದ್ದು, ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ.

ಸಾರ್ವಜನಿಕ ಶೌಚಾಲಯವಿಲ್ಲದೇ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಸೂಕ್ತ ನಿರ್ವಹಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ವ್ಯಾಪಾರಿ ದೈವತಾಬಾಯಿ, ಪಿಕೆಪಿಎಸ್‌ನ ಮಾಜಿ ಸದಸ್ಯೆ ರೂಪವತಿ ಜಾಧವ ಹೇಳಿದರು.

ತಾ.ಪಂ. ಇಒ ಮಹಾದೇವ ಜಮ್ಮು ಮಾತನಾಡಿ, ‘ಈಗಾಗಲೇ ಸಾರ್ವಜನಿಕ ಶೌಚಾಲಯಕ್ಕೆ ಸಂಬಂಧಿಸಿದಂತೆ ಗ್ರಾ.ಪಂ. ಯೋಜನೆಯಲ್ಲಿ ಅನುದಾನ ಮೀಸಲಿಟ್ಟು ಕ್ರಮ ಕೈಗೊಳ್ಳಲಾಗುವುದು. ಪಿಡಿಒ ಅವರೊಂದಿಗೆ ಚರ್ಚಿಸಿ, ಬೀದಿ ದೀಪಗಳನ್ನು ಅಳವಡಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಬೀದಿ ದೀಪಗಳಿಲ್ಲ: ಪಟ್ಟಣದ ಭಾಲ್ಕಿ–ಬಸವಕಲ್ಯಾಣ ರಾಜ್ಯ ಹೆದ್ದಾರಿಯ ಡಿವೈಡರ್‌ನಲ್ಲಿ ಅಳವಡಿಸಿರುವ ಬೀದಿ ದೀಪಗಳು ಒಂದು ವರ್ಷದಿಂದ ಉರಿಯುತ್ತಿಲ್ಲ. ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಲಾಗಿದ್ದ ಬೀದಿ ದೀಪಗಳ ನಿರ್ವಹಣೆ ಜವಾಬ್ದಾರಿ ಯನ್ನು ಗ್ರಾ.ಪಂ.ಗೆ ವಹಿಸಲಾಗಿತ್ತು. ಆದರೆ ನಿರ್ವಹಣೆ ಆಗುತ್ತಿಲ್ಲ.

‘ಅಪಘಾತಗಳು ಸಂಭವಿಸಿದ ಬಳಿಕವೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ದುರಂತ. ಬೀದಿ ದೀಪಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ರಾತ್ರಿ ವೇಳೆ ಮಹಿಳೆಯರು ಸಂಚರಿಸಲು ಭಯಪಡುವಂತಾಗಿದೆ. ಶೀಘ್ರ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ಸಾಮಾಜಿಕ ಕಾರ್ಯಕರ್ತ ಅಬ್ರಾರ್ ಸೌದಾಗರ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ಕಾಡದಿ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಗಮನಕ್ಕೂ ಬರಲಿ: ತಾಲ್ಲೂಕು ಕೇಂದ್ರದ ಸಾರ್ವಜನಿಕ ಶೌಚಾಲಯದ ಕೊರತೆ ಹಾಗೂ ಡಿವೈಡರ್‌ ದೀಪಗಳ ಸಮಸ್ಯೆ ಜನಪ್ರತಿನಿಧಿಗಳ ಗಮನದಲ್ಲಿದ್ದರೂ, ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಮೂಲಸೌಲಭ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಈ ಸಮಸ್ಯೆಗಳತ್ತ ಶಾಸಕರು ಕೂಡಲೇ ಗಮನಹರಿಸಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260831-33-1081860805

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ