
ಆಸ್ಕ್ ಮಿ ಎನಿಥಿಂಗ್: ‘ಜೆನ್–ಝೀ’ಗಳ ಜತೆ ರಾಹುಲ್ ಸಂವಾದ
ನವದೆಹಲಿ: ‘ಜೆನ್–ಝೀ’ ವರ್ಗದವರನ್ನು ತಲುಪುವ ಪ್ರಯತ್ನದ ಭಾಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಇನ್‌ಸ್ಟಾಗ್ರಾಮ್‌ನಲ್ಲಿ ‘ಆಸ್ಕ್ ಮಿ ಎನಿಥಿಂಗ್‘ (ನನ್ನನ್ನು ಏನು ಬೇಕಾದರೂ ಕೇಳಿ) ಸಂವಾದ ಕಾರ್ಯಕ್ರಮ ಆರಂಭಿಸಿದರು. ಈ ವೇಳೆ ಅವರು ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಕುರಿತ ಇನ್‌ಸ್ಟಾಗ್ರಾಮ್ ಲಿಂಕ್ ಅನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಅವರು, ‘ಜೆನ್–ಝೀ ಯುವಜನರೇ ನಿಮ್ಮ ಮಾತುಗಳನ್ನು ಕೇಳಲು ನಾನಿಲ್ಲಿ ಸಿದ್ಧನಿದ್ದೇನೆ. ಇನ್‌ಸ್ಟಾಗ್ರಾಮ್‌ನಲ್ಲಿ ನನ್ನನ್ನು ಏನು ಬೇಕಾದರೂ ಕೇಳಿ. ಸಾಧ್ಯವಾದಷ್ಟು ಪ್ರಶ್ನೆಗಳಿಗೆ ಉತ್ತರಿಸುತ್ತೇನೆ’ ಎಂದು ಹೇಳಿದ್ದಾರೆ.
ಕಾರ್ಯಕ್ರಮಕ್ಕೆ ಅನುಮತಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರಯಾಗರಾಜ್‌ನಲ್ಲಿ ಶನಿವಾರ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಧ್ವನಿ) ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಅಗತ್ಯವಿರುವ ಅನುಮತಿಗಳನ್ನು ಪಡೆಯಲಾಗಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.
ಈ ಕಾರ್ಯಕ್ರಮಕ್ಕೆ ಪೊಲೀಸರು ಕೆಲ ಷರತ್ತುಗಳೊಂದಿಗೆ ಅನುಮತಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಪಿಟಿಐಗೆ ತಿಳಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260808-51-1577992293