
ಪಶುವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮದ ಆರೋಪ: ಶಿಕ್ಷಕರ ಮನೆ ಮೇಲೆ ಇ.ಡಿ ದಾಳಿ
ಚಿಕ್ಕಬಳ್ಳಾಪುರ: ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗೌರಿಬಿದನೂರಿನ ಕರೇಕಲ್ಲಹಳ್ಳಿಯ ವಿದ್ಯಾ ನಗರದಲ್ಲಿರುವ ಶಿಕ್ಷಕ ದಂಪತಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಶಿಕ್ಷಕರಾದ ರಾಮಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಪುತ್ರ ಲೋಕೇಶ್ ಕೆಪಿಎಸ್‌ಸಿ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಗೊಂಡಿದ್ದರು.
ಮಂಗಳವಾರ ಬೆಳಿಗ್ಗೆ ವ್ಯಾಪಕ ಭದ್ರತೆಯೊಂದಿಗೆ ಈ ದಾಳಿ ನಡೆದಿದೆ.