ಬೆಂಗಳೂರು ಗ್ರಾಮಾಂತರ: ಬೆಳೆ ವಿಮೆ ನೋಂದಣಿಯಲ್ಲಿ ಗಣನೀಯ ಏರಿಕೆ

ಬೆಂಗಳೂರು ಗ್ರಾಮಾಂತರ: ಬೆಳೆ ವಿಮೆ ನೋಂದಣಿಯಲ್ಲಿ ಗಣನೀಯ ಏರಿಕೆ

ಬೆಂಗಳೂರು ಗ್ರಾಮಾಂತರ: ಬೆಳೆ ವಿಮೆ ನೋಂದಣಿಯಲ್ಲಿ ಗಣನೀಯ ಏರಿಕೆ

ವಿಜಯಪುರ (ದೇವನಹಳ್ಳಿ): ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಮಾಡಿರುವ ಬೆಳೆಗಳು ಮೊಳಕೆಯೊಡೆಯದೆ ನಷ್ಟ ಸಂಭವಿಸುವ ಆತಂಕ ರೈತರಲ್ಲಿ ಮನೆ ಮಾಡಿದ್ದ, ಈ ಬಾರಿ ಹೆಚ್ಚಿನ ಸಂಖ್ಯೆಯ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಒಟ್ಟು 23,588 ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೆಳೆ ವಿಮೆ ನೋಂದಣಿಯಲ್ಲಿ ಗಣನೀಯ ಏರಿಕೆಯಾಗಿದೆ.

ಕಳೆದ ವರ್ಷ ಜಿಲ್ಲೆಯ ನಾಲ್ಕು ತಾಲ್ಲೂಕಿನಿಂದ ಒಟ್ಟು 5,235 ಮಂದಿ ರೈತರು ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ್ದರು. ಈ ವರ್ಷ 23,588 ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಬಹುತೇಕ ರೈತರು ಈ ಬಾರಿ ರಾಗಿ ಬೆಳೆಗೆ ವಿಮೆ ಮಾಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ 4,392 ರೈತರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 12,483, ಹೊಸಕೋಟೆಯಲ್ಲಿ 2,362, ನೆಲಮಂಗಲ ತಾಲ್ಲೂಕಿನಲ್ಲಿ 4,351 ರೈತರು ಸೇರಿ ಒಟ್ಟು 23,588 ರೈತರು ಈ ಬಾರಿ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜುಲೈ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬಿತ್ತನೆ ಮಾಡಿಲ್ಲ. ಆಗಸ್ಟ್ ಮೊದಲ ವಾರದಲ್ಲಿ ಕೆಲವೆಡೆ ಮಳೆಯಾಗಿದ್ದು, ಬಿತ್ತನೆ ಮಾಡಿರುವ ಬೆಳೆಗಳು ಮೊಳಕೆಯೊಡೆಯದೆ ಒಣಗುತ್ತಿವೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 74 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ ಈವರೆಗೆ 46,216 ಹೆಕ್ಟೇರ್‌ಗಳಲ್ಲಿ ಮಾತ್ರ ಬಿತ್ತನೆಯಾಗಿದೆ. ಶೇ 62ರಷ್ಟು ಸಾಧನೆಯಾಗಿದೆ.

ಮಳೆ ಕೊರತೆಯಿಂದ ಬೆಳೆ ನಷ್ಟ ತಪ್ಪಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಹಾಗೂ ಇತರೆ ಇಲಾಖೆಗಳು ಬೆಳೆ ವಿಮೆ ಮಾಡಿಸುವಂತೆ ರೈತರಲ್ಲಿ ಜಾಗೃತಿ ಮೂಡಿಸಿವೆ. ಅದರಂತೆ ರೈತರು ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ, ಗ್ರಾಮ ಒನ್, ಬ್ಯಾಂಕ್‍ಗಳು ಸೇರಿದಂತೆ ವಿವಿಧೆಡೆ ರೈತರು ಬೆಳೆ ವಿಮೆಗೆ ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆ ಎದುರಾಗಿರುವುದರಿಂದ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಬಿತ್ತನೆ ಮಾಡಿರುವ ಬೆಳೆಗಳಿಂದ ನಷ್ಟ ತಗ್ಗಿಸಲು ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ವಿಮೆ ಮಾಡಿಸುವಂತೆ ಹೆಚ್ಚು ಅರಿವು ಮೂಡಿಸಲಾಗಿದೆ. ರೈತರು ಸಹ ಬೆಳೆ ವಿಮೆ ಮಾಡಿಸುವಲ್ಲಿ ಹೆಚ್ಚು ಆಸಕ್ತಿ ತೋರಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಕೊರತೆ ಪ್ರಮಾಣ ತೀವ್ರವಾಗಿದೆ. ಜುಲೈನಲ್ಲಿ ವಾಡಿಕೆ ಪ್ರಕಾರ 91 ಮಿ.ಮೀ ಮಳೆ ಆಗಬೇಕಿತ್ತು. ಶೇ 74 ರಷ್ಟು ಮಳೆ ಕೊರತೆ ಕಂಡು ಬಂದಿದೆ. ಆಗಸ್ಟ್‌ ಮೊದಲ ವಾರದಲ್ಲಿ ಜಿಲ್ಲೆಯ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆಯಿಂದ ಬಿತ್ತಿದ ಬೆಳೆಗಳು ಕೈಕೊಡುವ ಪರಿಸ್ಥಿತಿ ರೈತರಿಗೆ ಎದುರಾಗಿದೆ.

ಪ್ರಸ್ತುತ ಮಳೆ ಕೊರತೆಯ ನಡುವೆ ಎರಡೂವರೆ ಎಕರೆಗೆ ಜಮೀನಿಗೆ ರಾಗಿ ಬೆಳೆ ಬಿತ್ತನೆ ಮಾಡಿರುವೆ. ರಾಗಿ ಬೆಳೆಗೆ ವಿಮೆ ಮಾಡಿಸಿರುವುದು ಇದೇ ಮೊದಲು. ಮಳೆ ಕೈ ಕೊಟ್ಟರೆ ಬೆಳೆ ನಷ್ಟದಿಂದ ಪಾರಾಗಲು ಧರ್ಮಸ್ಥಳ ಸ್ವ ಸಹಾಯ ಸಂಘದಲ್ಲಿ ಈಚೆಗೆ ₹990 ನೀಡಿ ಬೆಳೆ ವಿಮೆ ಮಾಡಿಸಿರುವೆ.

– ಡಿ.ಜಿ ಜಗನಾಥ್ ರಾವ್, ದಂಡಿಗಾನಹಳ್ಳಿ ರಾಗಿ ಬೆಳೆಗಾರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260818-15-578016059

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ