ಹುಲಸೂರು: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು

ಹುಲಸೂರು: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು

ಹುಲಸೂರು: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು

ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಸಾಯಗಾಂವ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಗಳಿಗೆ ಇದೀಗ ಅಭಿವೃದ್ಧಿಯ ಸ್ಪರ್ಶ ದೊರೆತಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಂಸದ ಸಾಗರ ಖಂಡ್ರೆ ಅವರ ಅನುದಾನದಲ್ಲಿ ರಸ್ತೆ, ಸೇತುವೆ, ಸಿಸಿ ರಸ್ತೆ, ಚರಂಡಿ ಹಾಗೂ ಹೊಲದ ದಾರಿಗಳ ನಿರ್ಮಾಣ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪೂರ್ಣಗೊಂಡಿದ್ದು, ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ.

ಸಾಯಗಾಂವ ಹೋಬಳಿಯ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ₹19 ಕೋಟಿಗೂ ಅಧಿಕ ಅನುದಾನ ಕಲ್ಪಿಸಲಾಗಿದೆ. ಹರೇವಾಡಿ–ಅಟ್ಟರಗಾ ನಡುವಿನ ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆಯಡಿ ₹3.15 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ, ಶ್ರೀಮಾಳಿ–ಕೋಂಗಳಿ ನಡುವಿನ ಸುಮಾರು 4 ಕಿ.ಮೀ. ರಸ್ತೆ ಸುಧಾರಣೆ ಹಾಗೂ ಇಂಚೂರ್–ಲಾಧಾ–ಕುಂಟೆಗಾವ್–ಮೊರಂಬಿ ನಡುವಿನ ಸುಮಾರು 9 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿವೆ.

ಅಳವಾಯಿ, ವಾಂಝರಖೇಡಾ, ನಾರದ ಸಂಗಮ, ಹಲಸಿ ತುಗಾಂವ್, ಸಾಯಗಾಂವ್ ಹಾಗೂ ಮೇಹಕರ ಗ್ರಾಮಗಳಲ್ಲಿಯೂ ಸಿಸಿ ರಸ್ತೆ, ಚರಂಡಿ ಹಾಗೂ ಹೊಲದ ದಾರಿಗಳ ನಿರ್ಮಾಣ ಕಾಮಗಾರಿಗಳು ನಡೆದಿವೆ. ಕೋಂಗಳಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ಎರಡು ಹಳ್ಳಗಳಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ.

ಹೊಲದ ದಾರಿಗೂ ಅಭಿವೃದ್ಧಿಯ ಸ್ಪರ್ಶ: ಗ್ರಾಮೀಣ ರಸ್ತೆ ಅಭಿವೃದ್ಧಿಯ ಜತೆಗೆ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ದಾರಿಗಳಿಗೂ ಆದ್ಯತೆ ನೀಡಲಾಗಿದೆ. ಮೇಹಕರ ಗ್ರಾಮದಿಂದ ಹಳೆಯ ಅಳವಾಯಿ ಹೊಲಕ್ಕೆ ತೆರಳುವ ರಸ್ತೆಯನ್ನು ₹1 ಕೋಟಿ ವೆಚ್ಚದಲ್ಲಿ ಹಾಗೂ ಮೇಹಕರದಿಂದ ತೋರಿ ಬಸವಣ್ಣ ಹೊಲಕ್ಕೆ ತೆರಳುವ ದಾರಿಯನ್ನು ₹1.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಸಾಯಗಾಂವ್ ಗ್ರಾಮದಲ್ಲಿ ₹70 ಲಕ್ಷ ವೆಚ್ಚದಲ್ಲಿ ನಾಲ್ಕು ಹೊಲಗಳಿಗೆ ಸಂಪರ್ಕ ಕಲ್ಪಿಸುವ ದಾರಿಗಳು, ನಾರದ ಸಂಗಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಹೊಲದ ರಸ್ತೆ ಹಾಗೂ ಹಲಸಿ ತುಗಾಂವ್ ಗ್ರಾಮದ ಮಾಟೆಗಿಡಿ ಹೊಲಕ್ಕೆ ₹30 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ. ಇದರಿಂದ ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸಲು ಅನುಕೂಲವಾಗಿದೆ.

ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹೊಲಗಳಿಗೆ ಸಂಪರ್ಕ ಕಲ್ಪಿಸುವ ದಾರಿಗಳನ್ನು ‘ನಮ್ಮ ಹೊಲ–ನಮ್ಮ ದಾರಿ’ ಯೋಜನೆಯಡಿ ಹಂತ ಹಂತವಾಗಿ ನಿರ್ಮಿಸುವ ಕಾರ್ಯ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಅಲ್ತಾಫ್ ಮಿಯಾ ತಿಳಿಸಿದ್ದಾರೆ.

‘ಗ್ರಾಮೀಣ ರಸ್ತೆ ಅಭಿವೃದ್ಧಿಯ ಜತೆಗೆ ಹೊಲದ ದಾರಿಗಳಿಗೂ ಅನುದಾನ ಕಲ್ಪಿಸಿರುವುದು ರೈತರಿಗೆ ಅನುಕೂಲವಾಗಿದೆ. ಬೆಳೆದ ಉತ್ಪನ್ನಗಳನ್ನು ಸುಲಭವಾಗಿ ಮಾರುಕಟ್ಟೆಗೆ ಸಾಗಿಸಲು ಸಾಧ್ಯವಾಗಲಿದೆ. ಉಳಿದ ಗ್ರಾಮಗಳ ಹೊಲದ ದಾರಿಗಳನ್ನೂ ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು’ ಎಂದು ರೈತರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-33-111562752

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ