ಪಂಜಾಬ್‌ನ ಫಿರೋಜ್‌ಪುರದಲ್ಲಿ ಗುಂಡಿಕ್ಕಿ ಎಎಪಿ ನಾಯಕನ ಹತ್ಯೆ

ಪಂಜಾಬ್‌ನ ಫಿರೋಜ್‌ಪುರದಲ್ಲಿ ಗುಂಡಿಕ್ಕಿ ಎಎಪಿ ನಾಯಕನ ಹತ್ಯೆ

ಪಂಜಾಬ್‌ನ ಫಿರೋಜ್‌ಪುರದಲ್ಲಿ ಗುಂಡಿಕ್ಕಿ ಎಎಪಿ ನಾಯಕನ ಹತ್ಯೆ

ಫಿರೋಜ್‌ಪುರ: ಪಂಜಾಬ್‌ನ ಫಿರೋಜ್‌ಪುರದಲ್ಲಿ ಎಎಪಿ ನಾಯಕ ಗುರ್‌ಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಎಂಬುವವರನ್ನು ನಾಲ್ವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಮಾಮ್ಡೋಟ್ ಬಜಾರ್ ಬಳಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, 45 ವರ್ಷದ ಸಿಂಗ್ ಇದ್ದ ಕಾರಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಘಟನೆಯಲ್ಲಿ ಸಿಂಗ್ ತೀವ್ರವಾಗಿ ಗಾಯಗೊಂಡರು. ಅವರ ಜೊತೆಯಲ್ಲಿದ್ದ ಹರ್‌ಪ್ರೀತ್ ಅಲಿಯಾಸ್ ಹ್ಯಾಪಿ(22) ಎಂಬುವವರಿಗೂ ಗಾಯಗಳಾಗಿದ್ದವು.

ಗುರ್‌ಪ್ರೀತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರೊಳಗೆ ಅವರು ಮೃತಪಟ್ಟಿದ್ದರು. ಹರಿಪ್ರೀತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮ್ಯಾಮ್ಡೊಕ್ ನಗರ ಪಂಚಾಯಿತಿಗೆ ನೂತನ ಅಧ್ಯಕ್ಷರಾದ ವಿಕ್ಕಿ ಮೈನಿ, ಸಿಂಗ್ ಕಾರನ್ನು ಮತ್ತೊಂದು ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ದಾಳಿ ವೇಳೆ, ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಎಸ್‌ಎಸ್‌ಪಿ ಭೂಪಿಂದರ್ ಸಿಂಗ್ ಹೇಳಿದ್ದಾರೆ.

ಸಿಂಗ್ ತಂದೆ ಬಾಲ್ಕರ್ ಸಿಂಗ್ ಕಾಂಗ್ರೆಸ್‌ನ ಮಾಜಿ ನಾಯಕರಾಗಿದ್ದಾರೆ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ