ವೈದ್ಯಕೀಯ ಸಂಸ್ಥೆ: ಕಾಯಂ ನಿರ್ದೇಶಕರಿಲ್ಲ

ವೈದ್ಯಕೀಯ ಸಂಸ್ಥೆ: ಕಾಯಂ ನಿರ್ದೇಶಕರಿಲ್ಲ

ವೈದ್ಯಕೀಯ ಸಂಸ್ಥೆ: ಕಾಯಂ ನಿರ್ದೇಶಕರಿಲ್ಲ

ಬೆಂಗಳೂರು: ನಗರದಲ್ಲಿನ ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಶಿಕ್ಷಣದ ಜತೆಗೆ ತೃತೀಯ ಹಂತದ ಚಿಕಿತ್ಸೆಗಳನ್ನು ಒದಗಿಸುತ್ತಿವೆ. ಆದರೆ, ಬಹುತೇಕ ವೈದ್ಯಕೀಯ ಸಂಸ್ಥೆಗಳಿಗೆ ಪೂರ್ಣಾವಧಿ ನಿರ್ದೇಶಕರಿಲ್ಲ. ಇದರಿಂದಾಗಿ ಅಭಿವೃದ್ಧಿ ಚಟುವಟಿಕೆಗಳಿಗೆ ತೊಡಕಾಗಿದೆ.

ಹೃದಯ, ಮೂತ್ರಪಿಂಡ ಸೇರಿ ನಿರ್ದಿಷ್ಟ ಅಂಗಾಂಗಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ, ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವೃದ್ಧಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಮತ್ತು ತಜ್ಞರನ್ನು ಒಳಗೊಂಡಿರುವ 10ಕ್ಕೂ ಅಧಿಕ ವೈದ್ಯಕೀಯ ಸಂಸ್ಥೆಗಳು ನಗರದಲ್ಲಿವೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇವುಗಳು ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸುತ್ತಿವೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ನೆಫ್ರೊ–ಯುರಾಲಜಿ ಸಂಸ್ಥೆ ಹೊರತುಪಡಿಸಿ ನಗರದ ಉಳಿದ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಿಗೆ ಪೂರ್ಣಾವಧಿ ನಿರ್ದೇಶಕರಿಲ್ಲ.

ಸಂಸ್ಥೆಗಳ ದೈನಂದಿನ ಕಾರ್ಯಚಟುವಟಿಕೆಗಳು ಸುಗಮವಾಗಿ ನಡೆಯಲು ಹಿರಿತನದ ಆಧಾರದ ಮೇಲೆ ಅಲ್ಲಿನ ವೈದ್ಯರನ್ನೇ ಪ್ರಭಾರ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಕ್ಯಾನ್ಸರ್ ಚಿಕಿತ್ಸೆಗೆ ಸ್ಥಾಪಿತವಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸೇರಿ ವಿವಿಧ ವೈದ್ಯಕೀಯ ಸಂಸ್ಥೆಗಳಲ್ಲಿ ಕಾಯಂ ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿ, ನೇಮಕಾತಿ ಪ್ರಕ್ರಿಯೆ ನಡೆಸಿಲ್ಲ. ಇದರಿಂದಾಗಿ ಕಟ್ಟಡ ನಿರ್ಮಾಣ, ವೈದ್ಯಕೀಯ ಉಪಕರಣಗಳ ಅಳಡಿಕೆಯಂತಹ ಕಾರ್ಯಗಳಿಗೆ ಹಿನ್ನಡೆಯಾಗಿದೆ.

ನಿರ್ವಹಣೆ ಸವಾಲು: ಹಿರಿತನದ ಆಧಾರದ ಮೇಲೆ ಪ್ರಭಾರ ನಿರ್ದೇಶಕ ಹುದ್ದೆಗೆ ನೇಮಕಗೊಳ್ಳುವವರನ್ನು ನಿವೃತ್ತಿ ಸೇರಿ ವಿವಿಧ ಕಾರಣಗಳಿಂದ ಅಲ್ವಾವಧಿಗೆ ಬದಲಾಯಿಸಲಾಗುತ್ತಿದೆ. ಇದರಿಂದಾಗಿ ರೋಗಿಗಳ ನಿರ್ವಹಣೆ ಸೇರಿ ಸಂಸ್ಥೆಯ ದೈನಂದಿನ ಕಾರ್ಯಚಟುವಟಿಕೆಯಲ್ಲಿಯೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ಯಾನ್ಸರ್ ಚಿಕಿತ್ಸೆಯ ಜತೆಗೆ ಶಿಕ್ಷಣ, ಸಂಶೋಧನೆ ಹಾಗೂ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಈ ಸಂಸ್ಥೆಯು ಎರಡೂವರೆ ವರ್ಷದಲ್ಲಿ ಐವರು ನಿರ್ದೇಶಕರನ್ನು ಕಂಡಿದೆ.

‘ನಿರ್ದೇಶಕರಾಗಿ ನೇಮಕಗೊಂಡವರಿಗೆ ಸಂಸ್ಥೆಯ ಆಡಳಿತದ ಬಗ್ಗೆ ತಿಳಿದುಕೊಳ್ಳಲು ಕೆಲವು ತಿಂಗಳು ಬೇಕಾಗುತ್ತವೆ. ಪ್ರಭಾರ ನಿರ್ದೇಶಕರಿಗೆ ವಿವಿಧ ಟೆಂಡರ್‌ ಪ್ರಕ್ರಿಯೆಗಳನ್ನು ನಡೆಸುವ ಅಧಿಕಾರ ಇಲ್ಲದಿರುವುದರಿಂದ, ಔಷಧ ಕೊರತೆಯಂತಹ ಸಮಸ್ಯೆಗಳು ತಲೆದೋರಲಿವೆ. ಆಡಳಿತ ಯಂತ್ರವೂ ಕುಸಿಯಲಿದೆ. ಆದ್ದರಿಂದ ಪೂರ್ಣಾವಧಿ ನಿರ್ದೇಶಕರ ನೇಮಕಾತಿ ಪ್ರಕ್ರಿಯೆ ನಡೆಸಬೇಕು’ ಎಂದು ವೈದ್ಯಕೀಯ ಸಂಸ್ಥೆಯೊಂದರ ನಿವೃತ್ತ ನಿರ್ದೇಶಕರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸರ್ಕಾರಿ ಅನುದಾನದ ಜತೆಗೆ ಆಂತರಿಕ ಸಂಪನ್ಮೂಲದಿಂದಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದಾಗಿದೆ. ಆದರೆ ಪೂರ್ಣಾವಧಿ ನಿರ್ದೇಶಕರಿಲ್ಲದ ಪರಿಣಾಮ ಲಭ್ಯ ಅನುದಾನದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವಿಕೆ ಪಿಠೋ‍‍ಪಕರಣ ಔಷಧ ರಾಸಾಯನಿಕಗಳ ಖರೀದಿ ಅಗತ್ಯ ಮಾನವ ಸಂಪನ್ಮೂಲಗಳು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಕಷ್ಟಸಾಧ್ಯವಾಗುತ್ತಿದೆ.

ಯಾವೆಲ್ಲ ಸಂಸ್ಥೆಗಳಿಗೆಪೂರ್ಣಾವಧಿ ನಿರ್ದೇಶಕರಿಲ್ಲ?

→ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ

l→ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ

l→ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ

l→ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ

l→ಎಸ್‌ಡಿಎಸ್‌ಟಿಆರ್‌ಸಿ ಮತ್ತು ರಾಜೀವ್‌ ಗಾಂಧಿ ಎದೆರೋಗಗಳ ಸಂಸ್ಥೆ; ಬೆಂಗಳೂರು

l→ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ; ಬೆಂಗಳೂರು

l→ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ