ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಖಂಡಿಸಿ ಕಾಳಗಿ ಬಂದ್

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಖಂಡಿಸಿ ಕಾಳಗಿ ಬಂದ್

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಖಂಡಿಸಿ ಕಾಳಗಿ ಬಂದ್

ಕಾಳಗಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ರೈತರಿಗೆ ಸರ್ಕಾರ ಬೆಳೆ ಪರಿಹಾರ ವಿತರಣೆ ಮಾಡುವಲ್ಲಿ ಅನ್ಯಾಯ ಮಾಡಿದೆ. ಬೆಳೆ ವಿಮೆ ಬಿಡುಗಡೆ ಮಾಡುವಲ್ಲಿ ವಿಮೆ ಕಂಪನಿಯವರು ಮಲತಾಯಿ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ ಪ್ರಾಂತ ರೈತ ಸಂಘ ಮತ್ತು ರೈತ ಸೇನೆ ತಾಲ್ಲೂಕು ಘಟಕ ಕರೆ ನೀಡಿರುವ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಬಂದ್ ಅಂಗವಾಗಿ ಬೆಳಿಗ್ಗೆಯಿಂದಲೇ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿಕೊಂಡಿವೆ.

ವಾಹನಗಳ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.

ಈ ಮಧ್ಯೆ ನೂರಾರು ರೈತರು ಬಸವೇಶ್ವರ ವೃತ್ತದಿಂದ ಹಳೇ ಬಸ್ ನಿಲ್ದಾಣದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ರೈತರಿಗೆ ಅನ್ಯಾಯ ಮಾಡಿದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ‌ಹೊರಹಾಕಿದರು.

ಬಾರಕೋಲು ಝಳಪಿಸಿ, ಮಾನವ ಸರಪಳಿ ರಚಿಸಿ ಸರ್ಕಾರದ‌ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲಿಂದ ನಂತರದಲ್ಲಿ ಘೋಷಣೆ ಹಾಕುತ್ತ ಡಾ.ಬಿ.ಆರ್. ಅಂಬೇಡ್ಕರ್ ವೃತ್ತಕ್ಕೆ ಬಂದು ಅಂಬೇಡ್ಕರ್ ಪ್ರತಿಮೆಗೆ ಮತ್ತು ಬಸವೇಶ್ವರ ನಾಮಫಲಕದ ಭಾವಚಿತ್ರಕ್ಕೆ ಹೂಮಾಲೆ ಹಾಕಿ, ಬಳಿಕ ಮತ್ತೆ ಪ್ರತಿಭಟನೆ ‌ನಡೆಸಿದರು.

ತಾಲ್ಲೂಕಿನ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು, ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದಾರೆ.

ಕಲಬುರಗಿ-ಚಿಂಚೋಳಿ ರಸ್ತೆ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದ್ದು ಪ್ರತಿಭಟನೆ ಮುಂದುವರಿದಿದೆ. ಇದರಿಂದ ವಾಹನಗಳ ಸವಾರರು ಪರದಾಡಿದರು.

ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ, ಮಾಡಬೂಳ ಪಿಎಸ್ಐ ಗೌತಮ ಗುತ್ತೇದಾರ, ಕ್ರೈಂ ಪಿಎಸ್ಐ ಸಿದ್ದಲಿಂಗ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ