ವಿದ್ಯಾರ್ಥಿಗಳು, ಸಿಬ್ಬಂದಿಯ ಜ್ವರದ ಮಾಹಿತಿ ನೀಡದ ಕ್ಲಾರೆನ್ಸ್ ಶಾಲೆಗೆ ನೋಟಿಸ್

ವಿದ್ಯಾರ್ಥಿಗಳು, ಸಿಬ್ಬಂದಿಯ ಜ್ವರದ ಮಾಹಿತಿ ನೀಡದ ಕ್ಲಾರೆನ್ಸ್ ಶಾಲೆಗೆ ನೋಟಿಸ್

ವಿದ್ಯಾರ್ಥಿಗಳು, ಸಿಬ್ಬಂದಿಯ ಜ್ವರದ ಮಾಹಿತಿ ನೀಡದ ಕ್ಲಾರೆನ್ಸ್ ಶಾಲೆಗೆ ನೋಟಿಸ್

ಬೆಂಗಳೂರು: ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿಗೆ ಜ್ವರ ಬಂದಿರುವುದನ್ನು ಪಾಲಿಕೆಯ ಗಮನಕ್ಕೆ ತರದೇ, ದೃಢೀಕರಿಸದ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ ಕಾರಣ ರಿಚರ್ಡ್ಸ್‌ ಟೌನ್‌ನ ಕ್ಲಾರೆನ್ಸ್‌ ಶಾಲೆಯ ಆಡಳಿತ ಮಂಡಳಿಗೆ ಬೆಂಗಳೂರು ಉತ್ತರ ಪಾಲಿಕೆಯು ನೋಟಿಸ್ ನೀಡಿದೆ.

ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಶಾಲೆಯ ಇಬ್ಬರು ಶಿಕ್ಷಕರಿಗೆ ಮಾತ್ರ ಜ್ವರದ ಸೋಂಕು ದೃಢಪಟ್ಟಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಒಬ್ಬರು ಚಿಕಿತ್ಸೆ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಶಾಲೆಯ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿರುವ ಕುರಿತು ಯಾವುದೇ ವೈದ್ಯಕೀಯ ದಾಖಲೆ, ದೃಢೀಕೃತ ವರದಿಗಳು ಸಿಕ್ಕಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ವೈದ್ಯಕೀಯ ಸಾಕ್ಷ್ಯಾಧಾರಗಳಿಲ್ಲದೆ ಮಾಧ್ಯಮಗಳಿಗೆ ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಆತಂಕ ಮತ್ತು ಭೀತಿಯ ವಾತಾವರಣ ಸೃಷ್ಟಿಸುವುದು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯ ಉಲ್ಲಂಘನೆಯಾಗಿದೆ’ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260819-4-1070913510

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ