ದೇಗುಲದಲ್ಲಿ ಮೂತ್ರ ವಿಸರ್ಜನೆ: ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸುವಂತೆ ಆಗ್ರಹ

ದೇಗುಲದಲ್ಲಿ ಮೂತ್ರ ವಿಸರ್ಜನೆ: ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸುವಂತೆ ಆಗ್ರಹ

ದೇಗುಲದಲ್ಲಿ ಮೂತ್ರ ವಿಸರ್ಜನೆ: ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸುವಂತೆ ಆಗ್ರಹ

ಶಿಗ್ಗಾವಿ: ಪಟ್ಟಣದಲ್ಲಿರುವ ವೀರಾಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಹೇಯ ಮಾಡಿರುವ ತಪ್ಪಿತಸ್ಥನಿಗೆ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಹುಬ್ಬಳ್ಳಿ ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ ಆಗ್ರಹಿಸಿದ್ದಾರೆ.

ಪಟ್ಟಣದ ವೀರಾಂಜನೇಯ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದೇವಸ್ಥಾನದಲ್ಲಿ ನಡೆದ ಅಪವಿತ್ರ ಹಾಗೂ ಹೇಯ ಕೃತ್ಯ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥನಿಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗದಂತೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಶಿಗ್ಗಾವಿ-ಸವಣೂರು ಕ್ಷೇತ್ರವು ಅನೇಕ ಮಹಾತ್ಮರು ನೆಲೆಸಿದ ಪುಣ್ಯಭೂಮಿ. ಇದು ಶರಣರ ನಾಡು ಮತ್ತು ಶಾಂತಿಯ ತೋಟ. ಇಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಅಣ್ಣ-ತಮ್ಮಂದಿರಂತೆ ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಇಂತಹ ಪುಣ್ಯನೆಲದಲ್ಲಿ ಬೇರೆ ತಾಲ್ಲೂಕಿನಿಂದ ಬಂದ ವ್ಯಕ್ತಿಯೊಬ್ಬ ಇಂತಹ ದುಷ್ಕೃತ್ಯ ಎಸಗಿರುವುದು ನಮಗೆಲ್ಲರಿಗೂ ತೀವ್ರ ನೋವು ತಂದಿದೆ ಎಂದರು.

ಈದ್‌ ಮಿಲಾದ್‌ ದಿನ ಕರೆಯಲಾಗಿರುವ ಬಂದ ಕುರಿತು ಪ್ರತಿಕ್ರಿಯಿಸಿ, ಪ್ರತಿಭಟನೆ ಅಥವಾ ಬಂದ್ ಮಾಡುವುದು ಅವರ ಹಕ್ಕು. ಆದರೆ ಶಾಂತಿಪ್ರಿಯ ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರ ಜಯಂತಿ ಇರುವುದರಿಂದ ಬಂದ್ ವಾಪಸ್ ಪಡೆಯುವಂತೆ ಅಂಜುಮನ್ ಸಂಸ್ಥೆಯವರು ಹಿಂದೂ ಬಾಂಧವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಏನು ತೀರ್ಮಾನಿಸುತ್ತಾರೋ ನೋಡಬೇಕು. ಆದರೆ ಯಾವುದೇ ಧರ್ಮಕ್ಕೆ ನೋವಾಗದಂತೆ, ರಾಜಕೀಯ ಬೆರೆಸದೆ ನಾವೆಲ್ಲರೂ ಒಂದಾಗಿ ಈ ಕೃತ್ಯವನ್ನು ಖಂಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260825-22-968205041

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ