ರಾಯಚೂರು | ಸಚಿವ ಡಾ. ಅಜಯ್ ಸಿಂಗ್‌ ಅವರಿಂದ ಬರ ಪರಿಸ್ಥಿತಿ ಪರಿಶೀಲನೆ

ರಾಯಚೂರು | ಸಚಿವ ಡಾ. ಅಜಯ್ ಸಿಂಗ್‌ ಅವರಿಂದ ಬರ ಪರಿಸ್ಥಿತಿ ಪರಿಶೀಲನೆ

ರಾಯಚೂರು | ಸಚಿವ ಡಾ. ಅಜಯ್ ಸಿಂಗ್‌ ಅವರಿಂದ ಬರ ಪರಿಸ್ಥಿತಿ ಪರಿಶೀಲನೆ

ರಾಯಚೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ, ಕುಡಿಯುವ ನೀರಿನ ಕೊರತೆ ಮತ್ತು ಬೆಳೆ ಹಾನಿಯ ಸಮಗ್ರ ಅಧ್ಯಯನಕ್ಕಾಗಿ ಬರ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿರ್ದೇಶನದಂತೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಚಿವರು, ಶುಕ್ರವಾರ ರಾಯಚೂರು ಗ್ರಾಮಾಂತರ, ದೇವದುರ್ಗ, ಲಿಂಗಸುಗೂರು ಹಾಗೂ ಮಸ್ಕಿ ತಾಲ್ಲೂಕುಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್. ಜಿಲ್ಲಾಧಿಕಾರಿ ಪೂವಿತಾ ಎಸ್. ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ. ಕೃಷಿ ಇಲಾಖೆಯ ಜಂಟಿ ನಿರ್ದೆಶಕ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹತ್ತಿ , ಭತ್ತ, ಮುಂಗಾರು ಹಂಗಾಮಿನ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅಂತರ್ಜಲ ಮಟ್ಟವು ಗಣನೀಯವಾಗಿ ಕುಸಿದಿದೆ. ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಪೂವಿತಾ ಮಾಹಿತಿ ನೀಡಿದರು.

ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳ ಬಗ್ಗೆ ಸಚಿವರು ಮಾರ್ಗದರ್ಶನ ನೀಡಿದರು. ಆ.8ರಂದು ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲ್ಲೂಕುಗಳಿಗೆ ಭೇಟಿ ನೀಡಿ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ.

Post a Comment

If u have any queries, Please let us know

Previous Post Next Post