ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ (ರಾಮನಗರ): ಇಲ್ಲಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅವರೆಗೆರೆ ಸೇತುವೆ ಬಳಿ ಬೆಳಿಗ್ಗೆ ಕೇರಳದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳದಿಂದ ರಾತ್ರಿ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು. ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದಾಗ ಬಸ್ ಪಲ್ಟಿಯಾಗಿದೆ. ಶವಗಳನ್ನು ಚಲ್ಲಘಟ್ಟದಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ