ಉಜ್ಬೇಕಿಸ್ತಾನ, ಕಿರ್ಗಿಸ್ತಾನಕ್ಕೆ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ಉಜ್ಬೇಕಿಸ್ತಾನ, ಕಿರ್ಗಿಸ್ತಾನಕ್ಕೆ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ಉಜ್ಬೇಕಿಸ್ತಾನ, ಕಿರ್ಗಿಸ್ತಾನಕ್ಕೆ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದೇಶಗಳ ಪ್ರವಾಸದ ಭಾಗವಾಗಿ ಇಂದು (ಶನಿವಾರ) ಉಜ್ಬೇಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.

ಎರಡು ದೇಶಗಳ ಪ್ರವಾಸದ ಮೊದಲ ಹಂತವಾಗಿ ಮೋದಿ ಅವರ ಉಜ್ಬೇಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಎರಡನೇ ಹಂತವಾಗಿ ಕಿರ್ಗಿಸ್ತಾನಕ್ಕೆ ತೆರಳಲಿದ್ದಾರೆ.

ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆಯಲಿರುವ 26ನೇ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ಶೃಂಗಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಕಿರ್ಗಿಜ್ ಗಣರಾಜ್ಯಕ್ಕೆ ಪ್ರವಾಸ ಮಾಡಲಿದ್ದಾರೆ.

ಉಜ್ಬೇಕಿಸ್ತಾನ ಮತ್ತು ಕಿರ್ಗಿಜ್ ಗಣರಾಜ್ಯಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ‘ಮಧ್ಯ ಏಷ್ಯಾದಲ್ಲಿ ಭಾರತದ ಸಹಭಾಗಿತ್ವ ಬಲಪಡಿಸುವುದರ ಜತೆಗೆ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಬಲಗೊಳ್ಳುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ಮೋದಿ ಅವರು ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದು, ಉಭಯ ದೇಶಗಳ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಡಿಜಿಟಲ್ ಸಂಪರ್ಕ, ಇಂಧನ, ಶಿಕ್ಷಣ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಉಭಯ ನಾಯಕರೂ ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ತಾಷ್ಕೆಂಟ್ ಭೇಟಿಯ ಸಂದರ್ಭದಲ್ಲಿ ಮೋದಿ ಅವರು ಶಾಸ್ತ್ರಿ ಸ್ಮಾರಕ ಮತ್ತು ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿರುವ ಮಹಾತ್ಮ ಗಾಂಧಿ ಕೇಂದ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

‘ಶಾಂಘೈ ಸಹಕಾರ ಸಂಘಟನೆಯಲ್ಲಿ (ಎಸ್‌ಸಿಒ) ಭಾರತದ ದೃಷ್ಟಿಕೋನವನ್ನು ಮುನ್ನಡೆಸಲು ಮತ್ತು ಭಯೋತ್ಪಾದನೆ ಪಿಡುಗಿನಿಂದ ಮುಕ್ತವಾದ ಪ್ರದೇಶಕ್ಕಾಗಿ ಸದಸ್ಯ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ