ನೀರಚಿಲುಮೆ ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಸಾವು

ನೀರಚಿಲುಮೆ ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಸಾವು

ನೀರಚಿಲುಮೆ ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಸಾವು

ಉಜಿರೆ (ದಕ್ಷಿಣ ಕನ್ನಡ): ಉಜಿರೆ ಗ್ರಾಮದ ನೀರಚಿಲುಮೆ ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿಯಾಗಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರು ಬಳಿ ಪಾರೆಂಕಿ ಗ್ರಾಮದ ನಿವಾಸಿ ಬಾಬು ಕುಲಾಲ್ ಅವರ ಮಗ ಸನತ್ (30) ಎಂದು ಗುರುತಿಸಲಾಗಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಸಾಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಎದುರಿನಿಂದ ಬಂದ ಬೈಕ್‌ಗೆ  ಢಿಕ್ಕಿ ಹೊಡೆದಿದ್ದು, ಅದರ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್ ಕೂಡಾ ಜಖಂಗೊಂಡಿದೆ.

ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೇ ಉಜಿರೆಯ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಟರಲ್ಲೇ ಆತ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.  

ಬೈಕ್ ಸಹಸವಾರ ಭರತ್ ಬಳ್ಳಮಂಜ ಅವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಉಜಿರೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಅವರು ಧರ್ಮಸ್ಥಳ ಗ್ರಾಮದ ಕನ್ಯಾಡಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ