ರೇಣುಕಾಚಾರ್ಯ ಬಂಧನಕ್ಕೆ ಆಗ್ರಹಿಸಿದ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ

ರೇಣುಕಾಚಾರ್ಯ ಬಂಧನಕ್ಕೆ ಆಗ್ರಹಿಸಿದ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ

ರೇಣುಕಾಚಾರ್ಯ ಬಂಧನಕ್ಕೆ ಆಗ್ರಹಿಸಿದ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ

ದಾವಣಗೆರೆ: ‘ಪ್ರತಿಭಟನೆ ವೇಳೆ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ಬಂಧಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆಗ್ರಹಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ನಗರದಲ್ಲಿ ಬಿಜೆಪಿ ಶುಕ್ರವಾರ ಹಮ್ಮಿಕೊಂಡಿದ್ದ ರಸ್ತೆ ತಡೆ ಸಂದರ್ಭದಲ್ಲಿ ಅವರು ಅನುಚಿತವಾಗಿ ವರ್ತಿಸಿದ್ದಾರೆ. ಸಿಪಿಐ ಉಮೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ ಶಾಂತಿಗೆ ಧಕ್ಕೆ ತರಲು ಯತ್ನಿಸಿದ್ದಾರೆ’ ಎಂದು ಆರೋಪಿಸಿದರು.

‘ಈ ಹಿಂದೆ ಹೊನ್ನಾಳಿಯಲ್ಲಿ ಪ್ರತಿಭಟನೆ ವೇಳೆ ಹೈಡ್ರಾಮಾ ನಡೆಸುತ್ತಿದ್ದ ರೇಣುಕಾಚಾರ್ಯ ಅವರನ್ನು ಅಂದಿನ ಎಸ್‌ಪಿ ಸೋನಿಯಾ ನಾರಂಗ್ ಠಾಣೆಗೆ ಕರೆದೊಯ್ದು ಬುದ್ಧಿ ಕಲಿಸಿದ್ದನ್ನು ಅವರು ಮರೆತಿದ್ದಾರೆ. ಅನುಚಿತ ವರ್ತನೆ ಮುಂದುವರಿಸಿದ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಅಯೂಬ್ ಪೈಲ್ವಾನ್, ಎಚ್.ಆರ್. ನಾಗಭೂಷಣ್, ಅಲಿ ರೆಹಮತ್, ಎಸ್. ಮಲ್ಲಿಕಾರ್ಜುನ್, ರೆಹಮಾನ್ ಅಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260823-43-1680067960

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ