
ರೇಷ್ಮೆ ನೂಲು ಉದ್ಯಮದಲ್ಲಿ ತೊಡಗಿಸಿಕೊಳ್ಳಬೇಕೇ, ಸಿಗಲಿದೆ ಸರ್ಕಾರದ ಆರ್ಥಿಕ ನೆರವು
ಬೆಂಗಳೂರು: ಕರ್ನಾಟಕದಲ್ಲಿ ರೇಷ್ಮೆ ಕೃಷಿಗೆ ಸರ್ಕಾರವೇ ವಿಶೇಷ ಒತ್ತು ನೀಡುತ್ತಿದೆ. ರೇಷ್ಮೆ ಕೃಷಿ ಜತೆಗೆ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವವರಿಗೆ ಸರ್ಕಾರದಿಂದ ಪ್ರೋತ್ಸಾಹಧನ ಸಿಗಲಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ಪ್ರೋತ್ಸಾಹಧನ ನೀಡುವ ಯೋಜನೆಗಳನ್ನು ಪ್ರಕಟಿಸಿದೆ. ಇದರಡಿ ಹಲವು ರೀತಿಯ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲುವರಿಗೆ ನೆರವು ನೀಡಲಾಗುತ್ತದೆ.
ಸಮುದಾಯ ಆಧಾರಿತ ತರಬೇತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ(ಏತ ನೀರಾವರಿ ಯೋಜನೆ)ಗೆ ನೆರವು ಪಡೆಯಲು ಅವಕಾಶವಿದೆ.
ಅಲ್ಪಸಂಖ್ಯಾತ ಸಮುದಾಯದ ಸ್ವ ಸಹಾಯ ಗುಂಪುಗಳಿಗೆ ಪ್ರೋತ್ಸಾಹ ಧನ ಯೋಜನೆ (ಅಲ್ಪಸಂಖ್ಯಾತ ಮಹಿಳಾ ಸಹಕಾರ ಸಂಘವನ್ನು ಸ್ಥಾಪಿಸಲು)ವ, ಸಿಖ್ ಸಮುದಾಯದ ಜನರ ಆರ್ಥಿಕ ಸಬಲೀಕರಣ ಪ್ರೋತ್ಸಾಹ ಯೋಜನೆ. ವ್ಯಾಪಾರ ಉದ್ದಿಮೆ ನೇರ ಸಾಲ ಯೋಜನೆ, ನವೋದ್ಯಮ ಯೋಜನೆ ಇದರಲ್ಲಿ ಸೇರಿವೆ.
ಅಲ್ಪಸಂಖ್ಯಾತ ಸಮುದಾಯಗಳ ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ ಸೌಲಭ್ಯಗಳನ್ನು ಒದಗಿಸುವ ಅಭಿವೃದ್ಧಿ ಯೋಜನೆಯೂ ಇದರಡಿ ಸೇರಿದೆ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆಯಡಿ ವಿದ್ಯಾರ್ಥಿಗಳು ಸೌಲಭ್ಯ ಪಡೆದುಕೊಳ್ಳಬಹುದು.
ಮುಸ್ಲಿಂ, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಹಿಂದುಳಿದ ಕುಟುಂಬಗಳ ಆರ್ಥಿಕ ಸಬಲೀಕರಣ ಸ್ವಾವಲಂಬನೆ ಹಾಗೂ ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ಸಾಲ ಹಾಗೂ ಸಹಾಯಧನ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಅರ್ಹತಾ ಮಾನದಂಡಗಳು, ಅಗತ್ಯ ದಾಖಲಾತಿಗಳು ಹಾಗೂ ಇತರೆ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಾಲತಾಣ https://kmdclonline.karnataka.gov.in ಸಂಪರ್ಕಿಸುವಂತೆ ಕೋರಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 17 ಕೊನೆಯ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗಧಿತ ಅವಧಿಯೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ತಿಳಿಸಿದೆ.