ಕಲಬುರಗಿ: ಬರ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬರ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬರ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಳೆಯ ಕೊರತೆಯಿಂದಾಗಿ ಜಿಲ್ಲೆಯ ವಿವಿಧೆಡೆ ಹಾನಿಗೀಡಾದ ಬೆಳೆಗಳನ್ನು ಗೃಹ ಹಾಗೂ ಬರ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವೀಕ್ಷಿಸಿ ರೈತರು, ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಲ್ಲೂಕಿನ ಅವರಾದ (ಬಿ) ಗ್ರಾಮದ ಹೊರವಲಯದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು ಮಳೆಯಿಲ್ಲದೇ ಮುರುಟಿ ಹೋಗುತ್ತಿದ್ದ ತೊಗರಿ ಮತ್ತು ಸೋಯಾ ಬೆಳೆಗಳನ್ನು ವೀಕ್ಷಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಕಲಬುರಗಿ ಅಷ್ಟೇ ಅಲ್ಲದೇ ಎಲ್ ನಿನೊ ಪರಿಣಾಮದಿಂದಾಗಿ ರಾಜ್ಯದಾದ್ಯಂತ ಬರಗಾಲ ಆವರಿಸಿದೆ. ಎನ್ ಡಿಆರ್ ಎಫ್ ನಿಯಮಗಳನ್ನು ಸರಳೀಕರಣ ಮಾಡಿ ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕಳೆದ ಬಾರಿಯೂ ಸಕಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದ್ದಕ್ಕೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು ಎಂದರು‌.

'ಎಲ್ಲರಿಗೂ ಏಕರೂಪದ ಪರಿಹಾರ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ. ಬೆಳೆ ಹಾನಿಯ ಪರಿಶೀಲನೆ ನಡೆಸಿ ಅದರ ಆಧಾರದಲ್ಲಿ ರೈತರಿಗೆ ಪರಿಹಾರ ವಿತರಿಸಲಾಗುವುದು' ಎಂದು ಹೇಳಿದರು.

'ಜಿಲ್ಲೆಯಲ್ಲಿ ರೈತರಿಗೆ ಈಗಾಗಲೇ ₹ 657 ಕೋಟಿ ಬೆಳೆವಿಮೆ ಬಿಡುಗಡೆಯಾಗಿದೆ. ಹಿಂದಿನ ಸರ್ಕಾರ ಇಷ್ಟು ಪರಿಹಾರ ಕೊಡಿಸಿರಲಿಲ್ಲ' ಎಂದರು.

'ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ₹ 1 ಕೋಟಿ ಮೀಸಲಿಡಲಾಗಿದೆ' ಎಂದು ಹೇಳಿದರು.

ಶಾಸಕ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರ, ಡಿಐಜಿ ಶಾಂತನು ಸಿನ್ಹಾ, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಉಪವಿಭಾಗಾಧಿಕಾರಿ ಸಾಹಿತ್ಯ ಆಲದಕಟ್ಟಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತಹಶೀಲ್ದಾರ್ ಆನಂದಶೀಲ, ತಾ.ಪಂ. ಮಾನಪ್ಪ ಕಟ್ಟಿಮನಿ ಇತರರು ಈ ಸಂದರ್ಭದಲ್ಲಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ