ಉಡುಪಿ: ಬಸ್ ಡಿಕ್ಕಿಯಾಗಿ ನಗರಸಭೆ ಮಾಜಿ ಉಪಾಧ್ಯಕ್ಷೆ ಸಾವು
ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ವೃತ್ತದ ಬಳಿ ಬಸ್ ಡಿಕ್ಕಿ ಹೊಡೆದು ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್ ಕೊಳ(37) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಉಡುಪಿ ತಾಲ್ಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಶಾಸಕರ ಕಚೇರಿಗೆ ತೆರಳಿ, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಚಾರ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸುತ್ತಿದ್ದಾರೆ.