ನಿಗಮ, ಮಂಡಳಿ ಅಧ್ಯಕ್ಷ ಗಾದಿಗೆ ಹಿರಿಯ ಶಾಸಕರ ಲಾಬಿ

ನಿಗಮ, ಮಂಡಳಿ ಅಧ್ಯಕ್ಷ ಗಾದಿಗೆ ಹಿರಿಯ ಶಾಸಕರ ಲಾಬಿ

ನಿಗಮ, ಮಂಡಳಿ ಅಧ್ಯಕ್ಷ ಗಾದಿಗೆ ಹಿರಿಯ ಶಾಸಕರ ಲಾಬಿ

ನವದೆಹಲಿ: ಪ್ರಮುಖ ನಿಗಮ, ಮಂಡಳಿಗಳ ಅಧ್ಯಕ್ಷ ಗಾದಿ ಪಡೆಯಲು ಕಾಂಗ್ರೆಸ್‌ನ ಹಿರಿಯ ಶಾಸಕರು ಲಾಬಿ ಆರಂಭಿಸಿದ್ದಾರೆ.

ಈ ಸಂಬಂಧ ಏಳು ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಇಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

‘ನಮ್ಮ ಹಿರಿತನ ಹಾಗೂ ಯೋಗ್ಯತೆಯ ಆಧಾರದಲ್ಲಿ ನಿಗಮ, ಮಂಡಳಿಯಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿ ದ್ದೇವೆ. ನಾವು ಪಕ್ಷಕ್ಕೆ ನಿಷ್ಠರಾದ ಶಾಸಕರು.ಸಚಿವ ಸಂಪುಟ ವಿಸ್ತರಣೆ ಮುಗಿದು ಹೋದ ಅಧ್ಯಾಯ. ಅದರ ಬಗ್ಗೆ ಮಾತನಾಡುವು ದರಲ್ಲಿ ಅರ್ಥವಿಲ್ಲ. ಹೀಗಾಗಿ, ಉತ್ತಮ ನಿಗಮ, ಮಂಡಳಿಗೆ ಪರಿಗಣಿಸುವಂತೆ ಕೋರಿದ್ದೇವೆ’ ಎಂದು ಶಾಸಕ ಅಶೋಕ ಪಟ್ಟಣ ಸುದ್ದಿಗಾರರಿಗೆ ತಿಳಿಸಿದರು.

ಶಾಸಕ ಹಂಪನಗೌಡ ಬಾದರ್ಲಿ ಮಾತ ನಾಡಿ, ‘ಮಂತ್ರಿಮಂಡಲ ವಿಸ್ತರಣೆಯಲ್ಲಾದ ಅನ್ಯಾಯ ಸರಿಪಡಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಿಗಮ, ಮಂಡಳಿಗಳಲ್ಲಿ ಉತ್ತಮ ಅವಕಾಶ ನೀಡುವ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚಿಸಿದ್ದೇವೆ’ ಎಂದರು.

ಶಾಸಕರಾದ ಕೆ.ವೈ.ನಂಜೇಗೌಡ, ಡಿ.ಜಿ.ಶಾಂತನಗೌಡರ, ಬಸನಗೌಡ ದದ್ದಲ್‌,ಎನ್.ಎಚ್.ಕೋನರೆಡ್ಡಿ, ಜಿ.ಎಚ್.ಶ್ರೀನಿವಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260830-4-1508852572

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ