ಶಿವಮೊಗ್ಗ: ಪ್ರತ್ಯೇಕ ಶಾಲೆಗಳಲ್ಲಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಪ್ರತ್ಯೇಕ ಶಾಲೆಗಳಲ್ಲಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಪ್ರತ್ಯೇಕ ಶಾಲೆಗಳಲ್ಲಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಕಿವುಡ ಮತ್ತು ಮೂಗ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಅಕ್ಷರಾ ಎಂಬ ವಿದ್ಯಾರ್ಥಿನಿ ಶಾಲೆಯಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣ ಆಕೆಯನ್ನು ಸಮೀಪದ ಎನ್​ಯು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ದಾರಿ ಮಧ್ಯೆಯೇ ಅಕ್ಷರ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಶಿಕಾರಿಪುರ ತಾಲ್ಲೂಕಿನ ಅಣ್ಣಪ್ಪಗೆರೆ ಗ್ರಾಮದ ಅಕ್ಷರಾ, ಆ. 7ರಂದು ಮಾಚೇನಹಳ್ಳಿಯ ಶಾಲೆಗೆ ದಾಖಲಾಗಿದ್ದರು. ಆ. 9ರ ರಾತ್ರಿಯಿಂದಲೂ ಆಕೆಗೆ ವಾಂತಿ, ಭೇದಿ ಆಗಿತ್ತು. ಮರುದಿನ (ಆ.10) ಬೆಳಿಗ್ಗೆ ಶಾಲೆಗೆ ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ.‌ ಈ ಬಗ್ಗೆ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಶಾಲೆಯಲ್ಲಿ ಚೆಸ್ ಆಟ ವೀಕ್ಷಿಸಿದ್ದ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗ ತಾಲ್ಲೂಕಿನ ತಮ್ಮಡಿಹಳ್ಳಿ‌ ಗ್ರಾಮದ ಸರ್ಕಾರಿ ಹೈಸ್ಕೂಲ್‌ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ (15) ಮೃತ ವಿದ್ಯಾರ್ಥಿ.

ವಿನಯ್ ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ನೋಡುತ್ತಾ ಕುಳಿತಿದ್ದನು. ಈ ವೇಳೆ, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.

ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ವಿದ್ಯಾರ್ಥಿಯು ಮೃತಪಟ್ಟಿರುವುದಾಗಿ ಮೆಗ್ಗಾನ್ ವೈದ್ಯರು ಧೃಡಪಡಿಸಿದ್ದಾರೆ.

ಮೃತ ವಿನಯ್ ಮೂಲತಃ ಶಿಕಾರಿಪುರದವನಾಗಿದ್ದು, ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದನು.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ