ಹಾಸನ: ಬೆಲೆ ಏರಿಕೆ ಮಧ್ಯೆಯೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಹಾಸನ: ಬೆಲೆ ಏರಿಕೆ ಮಧ್ಯೆಯೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಹಾಸನ: ಬೆಲೆ ಏರಿಕೆ ಮಧ್ಯೆಯೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಹಾಸನ: ಹೂವು, ಹಣ್ಣು ಸೇರಿ ಪೂಜಾ ಸಾಮಗ್ರಿಗಳ ಬೆಲೆ ಏರಿಕೆಯಾಗಿದ್ದರೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮಕ್ಕೆ ಯಾವುದೇ ಕೊರತೆಯಾಗಿಲ್ಲ. ಶ್ರಾವಣ ಮಾಸದ ಎರಡನೇ ಶುಕ್ರವಾರ ನಡೆಯಲಿರುವ ವರಮಹಾಲಕ್ಷ್ಮಿ ಪೂಜೆಗೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಗರದ ಜನತೆ ಗುರುವಾರ ಮುಗಿಬಿದ್ದಿದ್ದರು.

ನಗರದ ಕಟ್ಟಿನಕೆರೆ ಮಾರುಕಟ್ಟೆ, ಮಹಾವೀರ ವೃತ್ತ, ಸಂತೆಪೇಟೆ ರಸ್ತೆ, ಸಿಟಿ ಬಸ್‌ ನಿಲ್ದಾಣ ರಸ್ತೆ ಸೇರಿದಂತೆ ಪ್ರಮುಖ ಬಡಾವಣೆಗಳ ವೃತ್ತಗಳಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ವ್ಯಾಪಾರ ಜೋರಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ಕಂಡುಬಂದಿತು.

ವರಮಹಾಲಕ್ಷ್ಮಿ ಪೂಜೆ ಮಾಡುವುದರಿಂದ, ಮನೆಯಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿಂದ ಮಹಿಳೆಯರು ಹಬ್ಬಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಂಡರು. ಮಲ್ಲಿಗೆ, ಸೇವಂತಿಗೆ, ಕನಕಾಂಬರ, ಸೇವಂತಿಗೆ, ಕಾಕಡ ಸೇರಿ ವಿವಿಧ ಹೂವುಗಳಿಗೆ ಬೇಡಿಕೆ ಹೆಚ್ಚಿತ್ತು. ಬಾಳೆಹಣ್ಣು, ಸೇಬು, ದಾಳಿಂಬೆ, ಸಪೋಟ, ಪೇರಲ ಸೇರಿ ವಿವಿಧ ಹಣ್ಣುಗಳ ಖರೀದಿಯೂ ಭರದಿಂದ ಆಯಿತು.

ಕಳಸ, ಬಾಳೆಕಂದು, ಬಳೆ, ಲಕ್ಷ್ಮೀ ಮುಖವಾಡ ಹಾಗೂ ವಿವಿಧ ಅಲಂಕಾರಿಕ ವಸ್ತುಗಳ ಖರೀದಿಗೆ ಮಹಿಳೆಯರು ಹೆಚ್ಚಿನ ಆಸಕ್ತಿ ತೋರಿದರು. ವರಮಹಾಲಕ್ಷ್ಮಿ ವ್ರತಕ್ಕೆ ವಿಶೇಷ ಮಹತ್ವ ಹೊಂದಿರುವ ತಾವರೆ ಹೂವಿಗೂ ಬೇಡಿಕೆ ಹೆಚ್ಚಿತ್ತು. ಬೆಲೆ ಏರಿಕೆಯ ನಡುವೆಯೂ ಪೂಜೆಗೆ ಅಗತ್ಯವಿರುವ ವಸ್ತುಗಳನ್ನು ಜನರು ಖರೀದಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಹೂವು, ಹಣ್ಣು ಹಾಗೂ ಕೆಲವು ಪೂಜಾ ಸಾಮಗ್ರಿಗಳ ಬೆಲೆಯಲ್ಲಿ ಏರಿಕೆಯಾಗಿದೆ. ಆದರೂ ಹಬ್ಬದ ಸಿದ್ಧತೆಯಲ್ಲಿ ಜನರು ಹಿಂದೆ ಸರಿಯಲಿಲ್ಲ. ಅಂಗಡಿಗಳಲ್ಲಿ ವಸ್ತುಗಳ ಬೆಲೆ ವಿಚಾರಿಸಿ ಚೌಕಾಸಿ ಮಾಡುತ್ತಿದ್ದ ದೃಶ್ಯವೂ ಕಂಡುಬಂತು.

ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಹೊಸ ಬಟ್ಟೆ, ಆಭರಣ ಹಾಗೂ ಬಳೆಗಳ ಖರೀದಿಯೂ ಜೋರಾಗಿತ್ತು. ಇದರಿಂದ ನಗರದ ಪ್ರಮುಖ ಮಾರುಕಟ್ಟೆ ಹಾಗೂ ಬಜಾರ್‌ ಪ್ರದೇಶಗಳಲ್ಲಿ ಜನರ ಓಡಾಟ ಹೆಚ್ಚಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-36-1551352742

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ