ಬ್ರಹ್ಮಾವರ: ತಂದೆ, ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಗ
ಉಡುಪಿ: ತಂದೆ, ತಾಯಿಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಪ್ರಕರಣ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಗಾಂಧಿನಗರದ ನಿವಾಸಿ ಮೆಹಬೂಬ್ ಅಲಿ ಹಾಗೂ ಪತ್ನಿ ಶಂಶಾದ್ ಬೇಗಂ ಕೊಲೆಯಾದವರು.
ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆಹಬೂಬ್ ಅಲಿ ಅವರು ಲಾರಿ ಚಾಲಕರಾಗಿದ್ದು, ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಆರೋಪಿ ಯಾವ ಕಾರಣಕ್ಕೆ ತಂದೆ, ತಾಯಿಯನ್ನು ಹತ್ಯೆ ಮಾಡಿದ್ದಾನೆ ಎಂಬುದು ತಿಳಿದು ಬಂದಿಲ್ಲ.