
ಕೊಡಗು: ಎಸ್.ಪಿ. ಕಚೇರಿಗೆ ರೈತ ಸಂಘದ ಕಾರ್ಯಕರ್ತರ ಮುತ್ತಿಗೆ
ಮಡಿಕೇರಿ: ಜುಲೈ 24ರಂದು ಬಿಡದಿಯಲ್ಲಿ ನಡೆಯುತ್ತಿದ್ದ ರೈತ ಹೋರಾಟ ಬೆಂಬಲಿಸಲು ತೆರಳುತ್ತಿದ್ದವರನ್ನು ತಡೆದು ವಶಕ್ಕೆ ಪಡೆದಿದ್ದನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಕೊಡಗಿನ ಸೋಮವಾರಪೇಟೆ ತಾಲ್ಲೂಕು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ನಂಜನಗೂಡು ತಾಲ್ಲೂಕಿನ ಕಾರ್ಯಕರ್ತರು ಭಾಗವಹಿಸಿದ್ದಾರೆ.