ಬರ ಪಟ್ಟಿಯಿಂದ ಕೊಟ್ಟೂರು ತಾಲ್ಲೂಕನ್ನು ಹೊರಗಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣ

ಬರ ಪಟ್ಟಿಯಿಂದ ಕೊಟ್ಟೂರು ತಾಲ್ಲೂಕನ್ನು ಹೊರಗಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣ

ಬರ ಪಟ್ಟಿಯಿಂದ ಕೊಟ್ಟೂರು ತಾಲ್ಲೂಕನ್ನು ಹೊರಗಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣ

ಕೊಟ್ಟೂರು: ನೀರಾವರಿ ಸೌಲಭ್ಯಗಳಿಂದ ವಂಚಿತವಾದ ಹಾಗೂ ಬರದ ನಾಡೆಂದು ಹೆಸರಾದ ಕೊಟ್ಟೂರು ತಾಲ್ಲೂಕನ್ನು ಸರ್ಕಾರ ಬರ ಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲ್ಲೂಕಿನಲ್ಲಿ ಒಟ್ಟು 38,523 ಹೆಕ್ಟೇರ್‍ ಮಳೆಯಾಶ್ರಿತ ಕೃಷಿ ಯೋಗ್ಯ ಭೂಮಿ ಇದ್ದು, ಇದರಲ್ಲಿ ಶೇ 10 ರಷ್ಟು ಮಾತ್ರ ನೀರಾವರಿ ಹೊಂದಿದ್ದು ಬಹು ಪಾಲು ಮಳೆಯಾಶ್ರಿತ ಪ್ರದೇಶವಾಗಿದೆ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತುವ ಹದ ತಪ್ಪೀತೆಂದು ಭೂಮಿಯನ್ನು ಸಜ್ಜುಗೊಳಿಸಿ ಬಿತ್ತನೆಗೆ ಮುಂದಾದ ಪರಿಣಾಮ ಸುಮಾರು 9 ಸಾವಿರ ಹೆಕ್ಟೇರ್ ಭೂಮಿ ಬಿತ್ತನೆಯನ್ನು ಕಂಡಿತ್ತು. ಮಳೆ ಬಾರದ ಹಿನ್ನೆಲೆಯಲ್ಲಿ ಪೈರು ಸಂಪೂರ್ಣ ಒಣಗಿದ ಪರಿಣಾಮ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಅನ್ನದಾತನ ಪರಿಸ್ಥಿತಿ ಇದೆ.

ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿ ರೈತರು ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿ, ಬೆಳೆ ವಿಮೆ ಪಾವತಿ, ಗೋ ಶಾಲೆಗಳನ್ನು ತೆರೆಯುವುದು, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮುಂತಾದ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕೆಂದು ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಹಾಗೂ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುಡಿಯಾರ್ ಮಲ್ಲಿಕಾರ್ಜುನ್ ಆಗ್ರಹಿಸಿದ್ದಾರೆ.

ಜಿಲ್ಲಾಡಳಿತ ತಾಲ್ಲೂಕಿನ ನೈಜ ಪರಿಸ್ಥಿತಿಯನ್ನು ಪುನಃ ಸರ್ವೇ ಮಾಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಬರ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಗರ ಘಟಕಾಧ್ಯಕ್ಷ ಪಂಪಾಪತಿ ಅಂಗಡಿ ಒತ್ತಾಯಿಸಿದ್ದಾರೆ.

ಕಳೆದ ಅಗಸ್ಟ್ ತಿಂಗಳಲ್ಲಿ ಸುರಿದ ಮಳೆಯನ್ನಾದರಿಸಿ ಸರ್ಕಾರ ಪಟ್ಟಿಯಿಂದ ಹೊರಗಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಜೆಡಿಎಸ್ ಬ್ಲಾಕ್ ಅಧ್ಯಕ್ಷ ಅಂಬಳಿ ಸೋಮಶೇಖರ್ ಹರಿಹಾಯ್ದಿದ್ದಾರೆ.

ಬರ ಪಟ್ಟಿಗೆ ತಾಲ್ಲೂಕನ್ನು ಸೇರಿಸಿ ನಷ್ಟಕ್ಕೀಡಾದ ನಮಗೆ ಪರಿಹಾರ ದೊರೆಯಬಹುದೆಂಬ ನಿರೀಕ್ಷೆಯಲ್ಲಿದ್ದಾರೆ ಈ ಭಾಗದ ರೈತರು.

ಕೊಟ್ಟೂರು ತಾಲ್ಲೂಕಿನ ಬಹುತೇಕ ಕೆರೆಗಳು ಬತ್ತಿ ಹೋಗಿದ್ದು, ಅಂತರ್ಜಲದ ಮಟ್ಟವೂ ಕುಸಿದು ನೀರಿನ ಅಭಾವ ತಲೆದೋರಿದೆ. ಜಾನುವಾರುಗಳ ಪರಿಸ್ಥಿತಿ ಹೇಳತೀರದು. ಬಿಸಿಲು, ಒಣಹವೆ ಮುಂದುವರಿದಿದ್ದು, ಮೋಡಗಳ ಛಾಯೆ ಕಂಡುಬಂದರೂ ಮಳೆಯ ಲಕ್ಷಣ ಮಾತ್ರ ಕಾಣದಿರುವುದರಿಂದ ರೈತರು ಮುಂದೆ ಹೇಗೆ ಎಂಬ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260829-25-268627790

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ