
ಕೂಡ್ಲಿಗಿಯಲ್ಲಿ ಪ್ರಜಾಸೇವೆ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ
ಹೊಸಪೇಟೆ: ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದು, ಸೆ.5ರಂದು ಕೂಡ್ಲಿಗಿ ಪಟ್ಟಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಮಟ್ಞದ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶಾಸಕರ ಕಚೇರಿ ಮುಂಭಾಗದ ಆವರಣದಲ್ಲಿ ಸೆ. 5 ರಂದು ಬೆಳಗ್ಗೆ 10ಕ್ಕೆ ಪ್ರಜಾಸೇವೆ ಆರಂಭವಾಗಲಿದೆ. ಈ ವೇಳೆ ವಿವಿಧ ಇಲಾಖೆಗಳಿಂದ ಪ್ರತ್ಯೇಕ ಕೌಂಟರ್ ಗಳಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನೊಂದಾಯಿಸಲಾಗುತ್ತದೆ. ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿ ಬಹುದು.
ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಅಭಿಯಾನ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260830-25-1825988855