ಮಾಲೂರು ದಿನ್ನಹಳ್ಳಿ ಸುಬ್ರಹ್ಮಣ್ಯ ಕಾವಡಿ ಮಹೋತ್ಸವ ವಿಜೃಂಭಣೆ

ಮಾಲೂರು ದಿನ್ನಹಳ್ಳಿ ಸುಬ್ರಹ್ಮಣ್ಯ ಕಾವಡಿ ಮಹೋತ್ಸವ ವಿಜೃಂಭಣೆ

ಮಾಲೂರು ದಿನ್ನಹಳ್ಳಿ ಸುಬ್ರಹ್ಮಣ್ಯ ಕಾವಡಿ ಮಹೋತ್ಸವ ವಿಜೃಂಭಣೆ

ಮಾಲೂರು: ತಾಲ್ಲೂಕಿನ ದಿನ್ನಹಳ್ಳಿ ಗ್ರಾಮದ ಸುಬ್ರಹ್ಮಣ್ಯ ಕಾವಡಿ ಮಹೋತ್ಸವವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.

ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ‘ದಿನ್ನಹಳ್ಳಿಯ ಸುಬ್ರಹ್ಮಣ್ಯ ದೇವಾಲಯಕ್ಕೆ ನೆರೆಯ ತಮಿಳುನಾಡಿನಿಂದಲೂ ಸಾವಿರಾರು ಭಕ್ತರು ಬರುತ್ತಾರೆ. ನಾನು ಶಾಸಕನಾಗುವ ಮುಂಚಿನಿಂದಲೂ ಕಾವಡಿ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದೇನೆ’ ಎಂದು ಹೇಳಿದರು.

ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ಅರಿಶಿನ ವಸ್ತ್ರ ಧರಿಸಿದ್ದ ನೂರಾರು ಭಕ್ತರು ಮಡಿಯಿಂದ ಕಾವಡಿಯನ್ನು ಹೆಗಲ ಮೇಲೆ ಹೊತ್ತು, ಮಂಗಳವಾದ್ಯಗಳ ನಾದದೊಂದಿಗೆ ಸುಬ್ರಹ್ಮಣ್ಯ ಸ್ವಾಮಿ ನಾಮಸ್ಮರಣೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ದಿನ್ನಹಳ್ಳಿ ರಮೇಶ್, ಚೇತನ್, ರಾಜಪ್ಪ, ಜಿಲ್ಲಾ ಅಟ್ರಾಸಿಟಿ ಸಮಿತಿ ಸದಸ್ಯ ರಾಜ್ ಕುಮಾರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260817-18-1836579036

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ