ಹನೂರು ಶೂಟೌಟ್‌ | ಸಮೀಪದಿಂದಲೇ ಗುಂಡು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ

ಹನೂರು ಶೂಟೌಟ್‌ | ಸಮೀಪದಿಂದಲೇ ಗುಂಡು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ

ಹನೂರು ಶೂಟೌಟ್‌ | ಸಮೀಪದಿಂದಲೇ ಗುಂಡು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ

ಮೈಸೂರು: ಕಾವೇರಿ ವನ್ಯಧಾಮದಲ್ಲಿ ಈಚೆಗೆ ನಡೆದ ಶೂಟೌಟ್‌ ಪ್ರಕರಣದಲ್ಲಿ ಅತ್ಯಂತ ಸಮೀಪದಿಂದ ಶಾಟ್‌ಗನ್‌ನಿಂದ ಗುಂಡು ಹಾರಿಸಿದ್ದರಿಂದ (ಕ್ಲೋಸ್‌ ರೇಂಜ್‌ ಶಾಟ್‌ಗನ್‌ ಶೂಟ್‌) ಆಳವಾದ ಗಾಯ, ವಿಪರೀತ ರಕ್ತಸ್ರಾವ ಹಾಗೂ ಆಘಾತದಿಂದ ಮೂವರು ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ಹನೂರಲ್ಲಿ ಅರಣ್ಯ ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಮೃತಪಟ್ಟ ಸೆಬಾಸ್ಟಿನ್‌ ಡೇವಿಡ್‌ ಕುಮಾರ್, ಜಾನ್‌ ರೋಸ್‌ ಪೀಟರ್ ಹಾಗೂ ಅಂತೋಣಿ ಸ್ವಾಮಿ ಶವಗಳ ಪರೀಕ್ಷೆಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ನಡೆಸಲಾಗಿತ್ತು.

ಮೈಸೂರು ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವೈದ್ಯಕೀಯ ವಿಭಾಗ (ಫಾರೆನ್ಸಿಕ್‌ ಡಿಪಾರ್ಟ್‌ಮೆಂಟ್‌) ಪೊಲೀಸರಿಗೆ ನೀಡಿದೆ ಎನ್ನಲಾದ ವರದಿ ‘ಪ್ರಜಾವಾಣಿ’ಗೆ ಲಭ್ಯವಾಗಿದ್ದು, ಅದರಲ್ಲಿ ಈ ಎಲ್ಲ ಅಂಶಗಳು ಬಹಿರಂಗವಾಗಿವೆ.

ಎದೆ ಹಾಗೂ ಹೊಟ್ಟೆ ಬಳಿ ಮತ್ತು ತೊಡೆಯಲ್ಲಿ ಗುಂಡೇಟಿನಿಂದ ಆದ ಹಲವಾರು ಆಳವಾದ ಗಾಯಗಳಿಂದ ತೀವ್ರ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಫಾರೆನ್ಸಿಕ್‌ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಯಾನಂದ ಆರ್. ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ಆನಂದ ಪಿ.ರಾಯಮಾನೆ ಅವರು ಶವಪರೀಕ್ಷೆ ನಡೆಸಿ, ವರದಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

‘ಪೊಲೀಸರಿಗೆ ಅಗತ್ಯ ವಿವರ ನೀಡಿದ್ದೇವೆ. ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿ ಬರಬೇಕಿದೆ. ಹೀಗಾಗಿ ಸಾವಿಗೆ ನಿಖರ ಕಾರಣವನ್ನು ಈಗಲೇ ತಿಳಿಸಲು ಸಾಧ್ಯವಿಲ್ಲ’ ಎಂದು ಡಾ.ದಯಾನಂದ ‘ಪ್ರಜಾವಾಣಿ’ಗೆ ತಿಳಿಸಿದರು. ಮೈಸೂರು ಮೆಡಿಕಲ್‌ ಕಾಲೇಜಿನ ಡೀನ್‌ ಡಾ.ಕೆ.ಆರ್‌. ದಾಕ್ಷಾಯಿಣಿ ಸಂಪರ್ಕಕ್ಕೆ ಸಿಗಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260825-51-1902383689

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ